ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಕಲ್ಯಾಣೋತ್ಸವ, ಅನ್ನಸಂತರ್ಪಣೆ

Published 14 ಫೆಬ್ರುವರಿ 2024, 3:03 IST
Last Updated 14 ಫೆಬ್ರುವರಿ 2024, 3:03 IST
ಅಕ್ಷರ ಗಾತ್ರ

ಸೋಮವಾರಪೇಟೆ: ಇಲ್ಲಿನ ಆಲೆಕಟ್ಟೆ ಸಾರ್ವಜನಿಕ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮೊದಲ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದಲ್ಲಿ ಮಂಗಳವಾರ ಬೆಳಿಗ್ಗೆ ಶ್ರೀನಿವಾಸ ಕಲ್ಯಾಣ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಪೂಜಾ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಗಿತ್ತು. ಶ್ರೀನಿವಾಸ ಕಲ್ಯಾಣೋತ್ಸವದ ನಂತರ ಮಹಾ ಮಂಗಳಾರತಿ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಅರ್ಚಕರಾದ ರಾಘವೇಂದ್ರ ಭಟ್ ನೇತೃತ್ವದಲ್ಲಿ ತಾಕೇರಿ ಗುರುಪ್ರಸಾದ್, ಸುರೇಶ್ ಪೂಜಾ ಕಾರ್ಯ ನಡೆಸಿದರು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎನ್.ಪಿ. ಭೀಮಯ್ಯ, ಉಪಾಧ್ಯಕ್ಷರಾದ ಮಹೇಶ್ ತಿಮ್ಮಯ್ಯ, ಪೆರುಮಾಳ್, ಪ್ರಧಾನ ಕಾರ್ಯದರ್ಶಿ ಎಚ್. ಮಂಜುನಾಥ್, ನಿರ್ದೇಶಕರಾದ ಸಿ.ಕೆ. ಮೋಹನ್, ಬಿ.ಡಿ. ಗೋವಿಂದ, ಪ್ರಮುಖರಾದ ಟಿ.ಪಿ. ಚಂಗಪ್ಪ, ಪ್ರಕಾಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ವಿಭಾಗದ ರಾಮ್‌ದಾಸ್ ಭಾಗವಹಿಸಿದ್ದರು.

ಸೋಮವಾರಪೇಟೆ ಆಲೆಕಟ್ಟೆ ಸಾರ್ವಜನಿಕ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಿಮಿತ್ತ ವಿಗ್ರಹಗಳನ್ನು ಅಲಂಕರಿಸಲಾಗಿತ್ತು
ಸೋಮವಾರಪೇಟೆ ಆಲೆಕಟ್ಟೆ ಸಾರ್ವಜನಿಕ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಿಮಿತ್ತ ವಿಗ್ರಹಗಳನ್ನು ಅಲಂಕರಿಸಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT