ಮಂಡ್ಯ: ಮೈಸೂರು ದಸರಾಕ್ಕೂ ಪುರಾತನವಾದ ಶ್ರೀರಂಗಪಟ್ಟಣ ದಸರಾ ಅ.3ರಿಂದ 5ರವರೆಗೆ ನಡೆಯಲಿದೆ. ಈ ಬಾರಿಯ ಉತ್ಸವವನ್ನು ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಉದ್ಘಾಟಿಸಲಿದ್ದಾರೆ.

‘ಕಿರಂಗೂರಿನ ಬನ್ನಿಮಂಟಪದಲ್ಲಿ ಮಧ್ಯಾಹ್ನ 3 ಗಂಟೆಗೆ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ ಹಾಗೂ ಜಂಬೂ ಸವಾರಿ ಆರಂಭಗೊಳ್ಳಲಿದೆ. ಮೂರು ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಎಸ್.ಎಂ.ಕೃಷ್ಣ ಜಂಬೂಸವಾರಿಗೆ ಚಾಲನೆ ನೀಡಲಿದ್ದು ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ, ವಿ.ಸೋಮಣ್ಣ, ಶಾಸಕ ರವೀಂದ್ರ ಶ್ರೀಕಂಠಯ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಬಾರಿ ಉತ್ಸವದಲ್ಲಿ ವಿಶೇಷವಾಗಿ ಹೆಲಿಕಾಪ್ಟರ್ ಜಾಯ್ ರೈಡ್, ಕೆಆರ್‌ಎಸ್ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೋತ್ಸವ ಆಯೋಜನೆ ಮಾಡಲಾಗಿದೆ. ಬೃಂದಾವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲಾಗುವುದು. ಜೊತೆಗೆ ಯುವದಸರಾ, ಗಾಳಿ ಪಟ ಉತ್ಸವ, ಆಹಾರ ಮೇಳ, ಪರಂಪರಾ ದರ್ಶನ, ಮಹಿಳಾ–ಮಕ್ಕಳ ದಸರಾ, ಕವಿಗೋಷ್ಠಿ ಆಯೋಜನೆ ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.