ಮೈಸೂರು: ‘ಜಿಲ್ಲಾಡಳಿತದಿಂದ ಏ.20ರಂದು ಈ ಬಾರಿ ರಾಜ್ಯಮಟ್ಟದ ಬಸವ ಜಯಂತಿಯನ್ನು ಆಚರಿಸಲಾಗುವುದು. ಅಧಿಕಾರಿಗಳು ವಿನೂತನವಾದ ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಆಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲಾಡಳಿತದಿಂದ ಪ್ರತಿಮೆಗೆ ಮಾಲಾರ್ಪಣೆ, ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಬಾರಿ ಹೊಸತನದಿಂದ ಹಾಗೂ ಬಸವಣ್ಣನವರ ತತ್ವ–ಆದರ್ಶ ಹೆಚ್ಚಿನ ಜನರಿಗೆ ತಲುಪುವಂತೆ ಜಯಂತಿ ನಡೆಸಲು ಯೋಜನೆ ರೂಪಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರಿಗೆ ಸೂಚಿಸಿದರು.

‘ಯಾವುದೇ ಲೋಪದೋಷ ಉಂಟಾಗದಂತೆ ಶಿಷ್ಟಾಚಾರದ ಪ್ರಕಾರ ನಡೆಯಬೇಕು. ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಮಾತನಾಡಿ, ‘ಜಯಂತಿ ಆಚರಣೆಗೆ ಸಂಘ–ಸಂಸ್ಥೆಗಳ ಸಹಯೋಗ ಮುಖ್ಯವಾಗಿದೆ. ಬಸವ ಬಳಗದ ಒಕ್ಕೂಟ ಸೇರಿದಂತೆ ವಿವಿಧ ಸಂಸ್ಥೆಗಳವರ ಸಲಹೆಯಂತೆ ಸಂಘ–ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ಸಮಿತಿವಾರು ಸಭೆಗಳನ್ನು ನಡೆಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸಲಾಗುವುದು’ ಎಂದು ತಿಳಿಸಿದರು.

ಬಸವ ಬಳಗ ಒಕ್ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ‘ಒಕ್ಕೂಟದಿಂದ ಏ.19ರಂದು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಲಾಮಂದಿರದಲ್ಲಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಪ್ರದರ್ಶನ ಹಾಗೂ ಏ.20ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಬಸವ ಬಳಗ ಒಕ್ಕೂಟದ ಮೆರವಣಿಗೆ ಸಮಿತಿ ಅಧ್ಯಕ್ಷ ಕೆ.ವಿ. ಮಲ್ಲೇಶ್, ‘ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಬಸವ ಜಯಂತಿಯಂದು ಶಂಕುಸ್ಥಾಪನೆ ನೆರವೇರಿಸುವುದು ಉತ್ತಮ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಯತ್ನಿಸಲಿ’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್್, ಎಎಸ್ಪಿ ಮಲ್ಲಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ಕನ್ನಡಪರ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಶಿವಶಂಕರ್ ಮತ್ತು ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.