ಮೈಸೂರು: ಕೋವಿಡ್‌ನಿಂದ ರೈತ ಸಮುದಾಯಕ್ಕೆ ಆಗಿರುವ ಸಂಕಷ್ಟಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜೂನ್ 17 ರಂದು ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

‘ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಕಚೇರಿಗಳ ಮುಂದೆ ಗುರುವಾರ ಬೆಳಿಗ್ಗೆ 11 ರಿಂದ 11.30ರ ವರೆಗೆ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ’ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಲಾಕ್‌ಡೌನ್‌ನಿಂದ ರೈತರಿಗೆ ಆಗಿರುವ ನಷ್ಟವನ್ನು ಅಂದಾಜಿಸಲು ತಜ್ಞರ ಸಮಿತಿ ನೇಮಕ ಮಾಡುವುದೂ ಸೇರಿದಂತೆ 10 ಬೇಡಿಕೆಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದೇವೆ. ಅವುಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು. ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ದೊಡ್ಡಮಟ್ಟಿನ ಚಳವಳಿ ಆರಂಭಿಸಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.