ಕೆ.ಆರ್.ನಗರ: ತಾಲ್ಲೂಕಿನ ಡಿ.ಕೆ.ಕೊಪ್ಪಲು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಚ್.ಜಿ.ಧನುಷ್ ಕುಮಾರ್ (15) ಶನಿವಾರ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದ ಗಿರೀಶ್ ಮತ್ತು ಸುಶೀಲಾ ದಂಪತಿಯ ಎರಡನೇ ಪುತ್ರ ಧನುಷ್ ಕುಮಾರ್, ಶಾಲೆಯಲ್ಲಿ ಶನಿವಾರ ಕನಕ ಜಯಂತಿ ಕಾರ್ಯಕ್ರಮ ಮುಗಿಸಿಕೊಂಡು ಬರುವಾಗ ಸ್ನೇಹಿತರೊಂದಿಗೆ ಕೆರೆ ಹತ್ತಿರ ಹೋಗಿದ್ದು, ಕೈಕಾಲು ತೊಳೆದುಕೊಳ್ಳಲು ಹೋದಾಗ ಬಿದ್ದು ಮೃತಪಟ್ಟಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳಕ್ಕೆ ಹೋದ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಶಿವಪ್ರಕಾಶ್ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ಶಾಸಕ ಡಿ.ರವಿಶಂಕರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉದಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಭೇಟಿ ನೀಡಿ ವಿದ್ಯಾರ್ಥಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.