ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಉತ್ತಮ ನಡವಳಿಕೆ, ಶಿಸ್ತು: ವಿದ್ಯಾರ್ಥಿಗಳಿಗೆ ಸಲಹೆ

Last Updated 28 ಜನವರಿ 2023, 6:16 IST
ಅಕ್ಷರ ಗಾತ್ರ

ಮೈಸೂರು: ‘ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಳ್ಳಬೇಕು ಹಾಗೂ ಕೌಶಲ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಗಿರಿಧರ್‌ ರಾವ್ ಎಂ.ಎಸ್. ಹೇಳಿದರು.

ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಈಚೆಗೆ ನಡೆದ ಪ್ರಥಮ ವರ್ಷದ ಎಂ.ಎ. ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪರಿಶ್ರಮವು ಗುರಿಯನ್ನು ಮುಟ್ಟುವ ಕಡೆಗೆ ಕರೆದೊಯ್ಯುತ್ತದೆ’ ಎಂದರು.

ಪ್ರಾಂಶುಪಾಲ ಡಾ.ಎಸ್.ಮರೀಗೌಡ, ಸಂಸ್ಥೆಯ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಮಾತನಾಡಿದರು.

2020–22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಅನಘಾ ಎಚ್‌.ಎನ್., ಅರ್ಪಿತಾ ಬಾಯಿ, ಗಯಾನಾ ಎಚ್.ಎನ್., ನಮಿತಾ ಎಸ್., ಪ್ರೀತಿ ಎಚ್‌.ಎಲ್., ಇನ್ಶಾ ಅಲಿಯಾ, ವೀರೇಂದ್ರಕುಮಾರ್ ಕೆ.ಸಿ. ಅವರನ್ನು ಅಭಿನಂದಿಸಲಾಯಿತು. ಸ್ನಾತಕೋತ್ತರ ಎಂ.ಕಾಂ. ಪದವಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ₹ 25ಸಾವಿರ ಸಹಾಯಧನವನ್ನು ಸಂಸ್ಥೆಯಿಂದ ನೀಡಲಾಯಿತು.

ಸಂಸ್ಥೆಯ ಗೌರವಾಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕೋಶಾಧ್ಯಕ್ಷ ಶ್ರೀಶೈಲ ರಾಮಣ್ಣವರ, ಕಾಲೇಜು ನಿರ್ವಹಣಾ ಮಂಡಳಿ ಅಧ್ಯಕ್ಷ ಟಿ.ನಾಗರಾಜು, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಸ್.ಪೂರ್ಣಿಮಾ, ಪ್ರೊ.ಎಂ.ಸಿ.ಅನುಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT