ಸಾಲಿಗ್ರಾಮ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿದರೆ ಮಾತ್ರ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ, ಇಲ್ಲದಿದ್ದರೆ ಅನಾರೋಗ್ಯಕರ ಪರಿಸ್ಥಿತಿಯಲ್ಲಿ ನಮ್ಮ ಮುಂದಿನ ಪೀಳಿಗೆ ಜೀವನ ನಡೆಸುವ ದುಸ್ಥಿತಿ ಎದುರಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ ಯೋಜನಾಧಿಕಾರಿ ಉಮೇಶ್ ಪೂಜಾರಿ ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ಹೊಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇಂದಿನ ಮಕ್ಕಳು ದೇಶದ ಮುಂದಿನ ಪ್ರಜೆಗಳು, ಆದ್ದರಿಂದ ವಿದ್ಯಾರ್ಥಿಗಳು ಕಲಿಕೆಯ ದಿನಗಳಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿ ಕೊಂಡರೆ ಜೀವನ ಪೂರ್ತಿ ಆರೋಗ್ಯಕರವಾಗಿ ಬದುಕು ಸಾಗಿಸಬಹುದು. ಹಾಗೊಂದು ವೇಳೆ ದುಶ್ಚಟಗಳನ್ನು ಕಲಿತರೆ ಹಲವು ರೋಗಗಳಿಗೆ ತುತ್ತಾಗಿ ನರಳುವ ಪರಿಸ್ಥಿತಿ ಎದುರಾಗುತ್ತದೆ. ಇದಕ್ಕೆ ವಿದ್ಯಾರ್ಥಿಗಳು ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ಕಲಿತರೆ ಸಮಾಜದಲ್ಲಿ ಎಲ್ಲರೂ ಗೌರವಿಸುತ್ತಾರೆ, ದುರಭ್ಯಾಸಗಳನ್ನು ಕಲಿತರೆ ಸಮಾಜದಿಂದಲ್ಲೇ ದೂರವಿಟ್ಟು ನೋಡುವ ಸ್ಥಿತಿ ಎದುರಾಗುತ್ತದೆ. ಯುವ ಸಮುದಾಯ ಸಹವಾಸದಿಂದ ದಾರಿ ತಪ್ಪುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿ ಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಂಜು, ಉಪನ್ಯಾಸಕರಾದ ಉಮಾಶಂಕರ್, ದಿಲೀಪ್, ಸಂಧ್ಯಾ, ರಂಜಿತಾ. ಅವಿನಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.