ಮೈಸೂರು: ‘ಕಬ್ಬಿನ ದರ ನಿಗದಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಟನ್ ಕಬ್ಬಿಗೆ ₹ 3,500 ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಅವರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ಅದು ಸರ್ಕಾರದ ಕರ್ತವ್ಯ’ ಎಂದರು.

‘ಆದರೆ, ಹಿಂದಿನಿಂದಲೂ ಎಲ್ಲ ವಿಷಯದಲ್ಲೂ ಸಿದ್ದರಾಮಯ್ಯ ಅವರು ಕೇಂದ್ರದತ್ತ ಆರೋಪ ಮಾಡುತ್ತಲೇ ಬಂದಿದ್ದಾರೆ. ಈ ಧೋರಣೆ ಬಿಟ್ಟು ರೈತರ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.
.ಕಬ್ಬಿಗೆ MRP ನಿಗದಿ ಮಾಡೋದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.