ಮೈಸೂರು: ಪ್ರತಿ ಟನ್ ಕಬ್ಬಿಗೆ ₹4 ಸಾವಿರ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

‘ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರ ಬೆಲೆ ನಿಗದಿ ಮಾಡಿರುವ ಎಫ್ಆರ್ಪಿ ಪರಿಶೀಲಿಸಿ ರಾಜ್ಯ ಸರ್ಕಾರದ ಸಲಹಾ ಬೆಲೆ ಕಾಯ್ಕೆಯಡಿ ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ಪ್ರತಿ ಟನ್ ಕಬ್ಬಿಗೆ ₹4 ಸಾವಿರ ನಿಗದಿ ಮಾಡಬೇಕು. ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಸಬೇಕು. 2023–24ನೇ ಸಾಲಿನ ಉಪ ಉತ್ಪನ್ನಗಳ ಲಾಭಾಂಶ ಹಂಚಿಕೆ ಮಾಡಬೇಕು. ಸಕ್ಕರೆ ಇಳುವರಿಯಲ್ಲಿ ಕಡಿಮೆ ತೋರುತಿದ್ದು ಜಿಲ್ಲಾಡಳಿತ ಅಧಿಕಾರಿಗಳ ತಂಡ ರಚನೆ ಮಾಡಿ ಇದರ ಬಗ್ಗೆ ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಎಚ್.ಡಿ.ಕೋಟೆ ಭಾಗದ ರೈತರು ತಂಬಾಕು ಬೆಳೆಗಳನ್ನೇ ನಂಬಿದ್ದಾರೆ. ತಂಬಾಕಿನ ಮಾರುಕಟ್ಟೆ ಬೆಲೆ ಕುಸಿತವಾದ್ದರಿಂದ ತಂಬಾಕು ಮಂಡಳಿ ಹಾಗೂ ಜಿಲ್ಲಾಡಳಿತ ಸ್ಥಳೀಯ ಸಂಸದರೊಂದಿಗೆ ಸಭೆ ನಡೆಸಿ ಸೂಕ್ತ ನ್ಯಾಯ ಒದಗಿಸಬೇಕು. ಮೈಸೂರು- ಚಾಮರಾಜ ನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಮಾನವ- ಪ್ರಾಣಿ ಸಂಘರ್ಷ ಹೆಚ್ಚಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕು. ಅಸಹಜ ಕಾಡು ಪ್ರಾಣಿ ಸಾವನ್ನಪ್ಪಿದರೆ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕು. ಪ್ರಾಣಿ ಸಂಘರ್ಷದಿಂದ ರೈತ ಸಾವನ್ನಪ್ಪಿದರೆ ಭಿಕ್ಷೆ ರೂಪದಲ್ಲಿ ಕೊಡುತ್ತಿರುವ ಪರಹಾರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಬೇಕು’ ಎಂದು ಆಗ್ರಹಿಸಿದರು.

‘ನಂಜನಗೂಡು ತಾಲ್ಲೂಕು ಏತ ನೀರಾವರಿ ಯೋಜನೆ ವಿಳಂಬವಾಗಿದ್ದು, ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಬೇಕು. ಭತ್ತ ಕಟಾವಿಗೆ ಮುಂಚಿತವಾಗಿ ಖರೀದಿ ಕೇಂದ್ರ ತೆಗೆದು ಎಂಸ್ಪಿ ಬೆಲೆಗಿಂತ ಹೆಚ್ಚುವರಿವಾಗಿ ₹500 ಸಹಾಯಧನ ನೀಡಬೇಕು. ಬನ್ನೂರು ಭಾಗದಲ್ಲಿ ಕೊಡಯ್ಸ್ ಬಿಲ್ವರಿ ಫ್ಯಾಕ್ಟರಿ ಅಕ್ರಮವಾಗಿ ಶುದ್ಧೀಕರಣ ಇಲ್ಲದ ನೀರನ್ನು ಖಾಸಗಿ ಕೊಳವೆಬಾವಿ ಹಾಗೂ ನಾಲೆಗಳ ಮೂಲಕ ಕಾರ್ಖಾನೆಗೆ ತರುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಹಾಡ್ಯ ರವಿ, ಮಹೇಶ್, ಸ್ವಾಮಿರಾಜ್, ಕುಮಾರ್, ಅಂಕನಹಳ್ಳಿ ತಿಮ್ಮಪ್ಪ, ಸಿದ್ದ, ರವಿ. ಶೋಭಾ, ಗುರುಮಲ್ಲಪ್ಪ, ಚಿಕ್ಕಸ್ವಾಮಿ, ಮಹದೇವಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.