ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಿಗ್ರಾಮ | ಆತ್ಮಹತ್ಯೆ ಪ್ರಕರಣ: ಗ್ರಾಮಸ್ಥರ ಪ್ರತಿಭಟನೆ

ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಆಕ್ರೋಶ
Published 10 ಜೂನ್ 2024, 4:14 IST
Last Updated 10 ಜೂನ್ 2024, 4:14 IST
ಅಕ್ಷರ ಗಾತ್ರ

ಸಾಲಿಗ್ರಾಮ: ಚಂದಗಾಲ ಗ್ರಾಮದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರದ ಅಂಬೇಡ್ಕರ್ ಪ್ರತಿಮೆ ಎದುರು ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

‘ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಬಗ್ಗೆ ಚಂದಗಾಲ ಗ್ರಾಮದ ಮಹದೇವನಾಯಕ ಅವರು ಕೆ.ಆರ್.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಸ್ವೀಕರಿಸಿರಲಿಲ್ಲ. ಮಹದೇಶ್ವರ ಬೆಟ್ಟದ ತಾಳಬೆಟ್ಟದಲ್ಲಿ ಕುಟುಂಬದ ಸದಸ್ಯರೊಂದಿಗೆ ಮಹದೇವನಾಯಕ ವಿಷ ಸೇವಿಸಿ, ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ಪೊಲೀಸರ ವಿರುದ್ಧ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ಬಿಗಿ ಬಂದೋಬಸ್ತ್‌: ಕೆ.ಆರ್.ನಗರಕ್ಕೆ ಮೃತರ ಶವ ಬಂದಾಗ ಠಾಣೆ ಮುಂದೆ ಧರಣಿಗೆ ಗ್ರಾಮಸ್ಥರು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ಮನವೊಲಿಸಿದರು. ನಂತರ ಅಂತ್ಯಸಂಸ್ಕಾರ ತೆಗೆದುಕೊಂಡು ಹೋಗಲು ನಿರ್ಧರಿಸಿದರು. ಚಂದಗಾಲ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಶಾಸಕ ಭೇಟಿ: ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಶಾಸಕ ಡಿ.ರವಿಶಂಕರ್, ‘ತಪ್ಪು ಮಾಡಿದವರು ಯಾರೇ ಆಗರಲಿ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು.

‘ವೈಯಕ್ತಿಕವಾಗಿ ₹ 2 ಲಕ್ಷ ನೀಡುವೆ. ಸದ್ಯ ₹ 1 ಲಕ್ಷ ಹಣವನ್ನು ನೀಡಿರುವೆ. ಚಿಕಿತ್ಸೆ ಪಡೆಯುತ್ತಿರುವವರಿಗೆ ₹ 25 ಸಾವಿರ ನೀಡಿರುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT