ತಾಲ್ಲೂಕಿನ ಕಡಕೊಳ ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು (ಸೆಸ್ಕ್) ಶನಿವಾರ ಏರ್ಪಡಿಸಿದ್ದ ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಎಲ್ಲಾ ಜಿಲ್ಲಾ ಕೇಂದ್ರಗಳು, ಪ್ರವಾಸಿ ತಾಣಗಳು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲಾಗುವುದು’ ಎಂದರು.