ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕೈ ಬಲಪಡಿಸಲು ನನ್ನ ಬೆಂಬಲಿಸಿ: ಯದುವೀರ್

Published 29 ಮಾರ್ಚ್ 2024, 13:59 IST
Last Updated 29 ಮಾರ್ಚ್ 2024, 13:59 IST
ಅಕ್ಷರ ಗಾತ್ರ

ಮೈಸೂರು: ‘ಭಾರತದ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ನನ್ನನ್ನು ಬೆಂಬಲಿಸಬೇಕು’ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದರು.

ಇಲ್ಲಿನ ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಶುಕ್ರವಾರ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿ ಬೆಂಬಲ ಕೋರಿದ ನಂತರ ಅವರು ಮಾತನಾಡಿದರು.

‘ನಾಯಕ ಸಮಾಜ ಮಹಾರಾಜರ ಕಾಲದಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಬಾರಿ ನಾನು ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದೇನೆ. ಎಲ್ಲರೂ ಸಹಕಾರ ಕೊಡಬೇಕು’ ಎಂದರು.

ಎಂ. ಅಪ್ಪಣ್ಣ ಮಾತನಾಡಿ, ‘ಪಕ್ಷದ ಸೂಚನೆಯ ಮೇರೆಗೆ ನಮ್ಮ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ, ಚುನಾವಣಾ ಸಂಚಾಲಕ ಮೈ.ವಿ.ರವಿಶಂಕರ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮುಖಂಡರಾದ ಎಸ್. ಮಹದೇವಯ್ಯ, ಶಬರೀಶ್, ಮಹೇಶ್, ವಸಂತ್‌ಕುಮಾರ್, ಪ್ರಭಾಕರ್, ರಾಜು, ಸುರೇಶ್, ನಾಗೇಂದ್ರ ಹಾಗೂ ನಾಯಕ ಸಮಾಜದ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT