ಜೆಡಿಎಸ್ ಶಾಸಕ ಕೆ.ಮಹದೇವ್ ಹೇಳಿಕೆ; ₹1.10 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಬೆಂಬಲಿಸುವೆ: ಜೆಡಿಎಸ್ ಶಾಸಕ

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‘ನಾನೂ ಸಿದ್ದರಾಮಯ್ಯ ಅಭಿಮಾನಿ. ಅವರು ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧವಿದ್ದೇನೆ. ಇದನ್ನು ಕುರುಬ ಸಮಾಜದವರು ಮನಸ್ಸಿನಲ್ಲಿಟ್ಟುಕೊಳ್ಳಬೇಕು’ ಎಂದು ಜೆಡಿಎಸ್ ಶಾಸಕ ಕೆ.ಮಹದೇವ್ ಹೇಳಿದರು.
ತಾಲ್ಲೂಕಿನ ಇಟಗಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅನುದಾನ ತಂದು ತಾಲ್ಲೂಕನ್ನು ಅಭಿವೃದ್ಧಿಪಡಿಸುವ ಸುವರ್ಣಾವಕಾಶವನ್ನು ಆಗಿನ ಶಾಸಕ ಕೆ.ವೆಂಕಟೇಶ್ ಕೈಚೆಲ್ಲಿದರು. ತಮ್ಮ ವಿಲಾಸಿ ಜೀವನಶೈಲಿಯಿಂದ ತಾಲ್ಲೂಕನ್ನು ಹಿಂದುಳಿಯುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.