ಮೈಸೂರು: ‘ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ಜ.26ರಿಂದ 31ರವರೆಗೆ ನಡೆಯಲಿರುವ ‘ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ’ದ ಅಂಗವಾಗಿ ಜನರ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ತಿಳಿಸಿದರು.

ಸುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭಕ್ತರು, ಸೇವಾರ್ಥದಾರರು, ಸಾರ್ವಜನಿಕರು, ಸಂಘ–ಸಂಸ್ಥೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಸಹಾಯ–ಸಹಕಾರದಿಂದ ನಡೆಯಲಿದೆ. ಉತ್ಸವದ ಸಿದ್ಧತೆಯು ಭರದಿಂದ ಸಾಗಿದೆ’ ಎಂದು ಹೇಳಿದರು.

‘ಜ.26ರಂದು ಬೆಳಿಗ್ಗೆ 8ಕ್ಕೆ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 76ನೇ ಗಣರಾಜ್ಯೋತ್ಸವ ನಡೆಯಲಿದ್ದು, ದೇವನೂರು ಗುರುಮಲ್ಲೇಶ್ವರ ಮಠದ ಮಹಾಂತ ಸ್ವಾಮೀಜಿ, ವಾಟಾಳು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಂಕರ ಬಿದರಿ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಧ್ವಜಾರೋಹಣ ನೆರವೇರಿಸುವರು. ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಸೇರಿದಂತೆ ಹಲವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು‘ ಎಂದರು.

ವಿವಿಧ ಮೇಳಕ್ಕೆ ಚಾಲನೆ: ‘ಅಂದು ಸಂಜೆ 4ಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಆಲಗೂರು ಬಬಲೇಶ್ವರ ಮಠದ ಪಂಚಮಸಾಲಿ ಮಠದ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಹಾಗೂ ಸಂಸದ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಸ್ತುಪ್ರದರ್ಶನ ಉದ್ಘಾಟಿಸುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕೃಷಿ ಮೇಳಕ್ಕೆ ಚಾಲನೆ ನೀಡುವರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಾಂಸ್ಕೃತಿಕ ಮೇಳ ಉದ್ಘಾಟಿಸುವರು. ಆರೋಗ್ಯ ತಪಾಸಣಾ ಶಿಬಿರ, ದೋಣಿ ವಿಹಾರವೂ ಉದ್ಘಾಟನೆಗೊಳ್ಳಲಿದೆ’ ಎಂದು ವಿವರಿಸಿದರು.

‘27ರಂದು ಬೆಳಿಗ್ಗೆ 10ಕ್ಕೆ ಸಾಮೂಹಿಕ ವಿವಾಹ ನಡೆಯಲಿದ್ದು, 24 ಅಂತರ್ಜಾತಿ, ಒಂದು ಅಂತರ್ಧರ್ಮೀಯ ಸೇರಿದಂತೆ 155 ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲಿವೆ. ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗದಗದ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ ಸಮ್ಮುಖ ವಹಿಸಲಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸುವರು. ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು, ಸಚಿವರಾದ ರಾಮಲಿಂಗಾ ರೆಡ್ಡಿ, ಶಿವರಾಜ್ ಎಸ್. ತಂಗಡಗಿ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.

‘ಅಂದು ಸಂಜೆ 4ಕ್ಕೆ ರಾಜ್ಯಮಟ್ಟದ ಭಜನಾ ಮೇಳ, ದೇಸಿ ಆಟಗಳು, ಸೋಬಾನೆ ಪದ, ರಂಗೋಲಿ ಸ್ಪರ್ಧೆ ಹಾಗೂ ಜಾತ್ರಾ ಮಹೋತ್ಸವ ಉದ್ಘಾಟನೆಗೊಳ್ಳಲಿದೆ. ಅರ್ಕ ಫೌಂಡೇಷನ್ ಸಂಸ್ಥಾಪಕ ಯೋಗಿ ಶ್ರೀನಿವಾಸ ಅರ್ಕ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಮ್ಮುಖ ವಹಿಸಲಿದ್ದು, ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸುವರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಾಟಕೋತ್ಸವ ಉದ್ಘಾಟಿಸುವರು. ಸಚಿವ ಮಧು ಬಂಗಾರಪ್ಪ ಭಜನಾ ಮೇಳ ಉದ್ಘಾಟಿಸಲಿದ್ದು, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ದೇಸಿ ಆಟಗಳ ಸ್ಪರ್ಧೆಗೆ ಚಾಲನೆ ನೀಡುವರು’ ಎಂದರು.

‘ಭಜನಾ ಮೇಳದಲ್ಲಿ 7 ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 800ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಪುರುಷ, ಮಹಿಳೆ ಹಾಗೂ ಮಕ್ಕಳ ವಿಭಾಗದಲ್ಲಿ ಸ್ಪರ್ಧೆ ಇರಲಿದೆ. ಪ್ರತಿ ವಿಭಾಗದಲ್ಲೂ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುವುದು’ ಎಂದರು.

30ರಂದು ಕುಸ್ತಿ ಪಂದ್ಯಗಳು: ‘30ರಂದು ಮಧ್ಯಾಹ್ನ 2ಕ್ಕೆ ಕುಸ್ತಿ ಪಂದ್ಯಗಳು ನಡೆಯಲಿದ್ದು, ಮಲ್ಲನಮೂಲೆ ಮಠದ ಚನ್ನಬಸವ ಸ್ವಾಮೀಜಿ, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖ ವಹಿಸುವರು. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸುವರು. ಅಂದು ಸಂಜೆ 5ಕ್ಕೆ ಕೃಷಿ ಮೇಳ ಮತ್ತು ದನಗಳ ಜಾತ್ರೆ ಸಮಾರೋಪಗೊಳ್ಳಲಿದೆ. ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ ಮತ್ತು ಗುರುಸಿದ್ದೇಶ್ವರ ಬೃಹನ್ಮಠದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಸಂಸದ ಜಗದೀಶ್ ಎಸ್. ಶೆಟ್ಟರ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಸಮಾರೋಪ ಭಾಷಣ ಮಾಡುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

‘ಜ.31ರಂದು ಬೆಳಿಗ್ಗೆ 10.30ಕ್ಕೆ ಸಾಂಸ್ಕೃತಿಕ ಮೇಳೆ ಮತ್ತು ವಸ್ತುಪ್ರದರ್ಶನದ ಸಮಾರೋಪ ನಡೆಯಲಿದ್ದು, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಸಮ್ಮುಖ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆ ವಹಿಸುವರು. ಸಚಿವರಾದ ಎಂ.ಬಿ. ಪಾಟೀಲ, ಎಚ್.ಕೆ. ಪಾಟೀಲ ಮತ್ತು ಬಿ.ಎಸ್. ಸುರೇಶ್ ಪಾಲ್ಗೊಳ್ಳುವರು’ ಎಂದರು.

ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಶಿವಕುಮಾರ್, ಆಡಳಿತಾಧಿಕಾರಿ ಎಸ್.ಪಿ. ಉದಯಶಂಕರ್, ದಾಸೋಹ ಸಮಿತಿಯ ಸಂಚಾಲಕ ಸುಬ್ಬಪ್ಪ ಪಾಲ್ಗೊಂಡಿದ್ದರು.

Highlights - ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ಭರದಿಂದ ಸಾಗಿರುವ ತಯಾರಿ ಸಮಾರೋಪದಲ್ಲಿ ಸಿದ್ದರಾಮಯ್ಯ ಭಾಗಿ

ಧಾರ್ಮಿಕ ಸಭೆ ದನಗಳ ಪರಿಷೆ

‘28ರಂದು ಬೆಳಿಗ್ಗೆ 11.10ಕ್ಕೆ ರಥೋತ್ಸವ 11.30ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ರವಿಶಂಕರ್ ಗುರೂಜಿ ಕೊಟ್ಟೂರುಸ್ವಾಮಿ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಮ್ಮುಖ ವಹಿಸಲಿದ್ದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಜಿ.ಟಿ. ದೇವೇಗೌಡ ತನ್ವೀರ್ ಸೇಠ್ ಮತ್ತಿತರರು ಭಾಗವಹಿಸುವರು’ ಎಂದು ಮಂಜುನಾಥ್ ತಿಳಿಸಿದರು. ‘28ರ ಸಂಜೆ 4ಕ್ಕೆ ಚಿತ್ರಕಲೆ ಗಾಳಿಪಟ ಸ್ಪರ್ಧೆ ಮತ್ತು 54ನೇ ದನಗಳ ಪರಿಷೆ ನಡೆಯಲಿದೆ. ಪುಲಿಪ್ಪನಿ ಸಿದ್ಧರ್ ಆಶ್ರಮದ ವಲಾರ್ ಶಿವಾನಂದ ಪುಲಿಪ್ಪಿ ಪಾತಿರಕರ ಸ್ವಾಮೀಜಿ ಕಾಖಂಡಕಿಯ ಗುರುದೇವಾಶ್ರಮದ ಶಿವಯೋಗೀಶ್ವರ ಸ್ವಾಮೀಜಿ ಸಮ್ಮುಖ ವಹಿಸುವರು. ಸಚಿವ ಶಿವಾನಂದ ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಸಚಿವ ಕೆ. ವೆಂಕಟೇಶ್ ದನಗಳ ಜಾತ್ರೆ ಉದ್ಘಾಟಿಸುವರು. ಚಿತ್ರಕಲೆ ಸ್ಪರ್ಧೆಯನ್ನು ಸಚಿವ ಮಂಕಾಳ ಎಸ್. ವೈದ್ಯ ಹಾಗೂ ಗಾಳಿಪಟ ಸ್ಪರ್ಧೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಉದ್ಘಾಟಿಸುವರು’ ಎಂದರು.

ಪ್ರಗತಿಪರ ರೈತರಿಗೆ ಸನ್ಮಾನ

‘29ರಂದು ಬೆಳಿಗ್ಗೆ 10.30ಕ್ಕೆ ಕೃಷಿ ವಿಚಾರಸಂಕಿರಣವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ಕಾಶಿ ಜ್ಞಾನಸಿಂಹಾಸನ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪುಷ್ಪಗಿರಿ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ಸಚಿವ ಈಶ್ವರ ಬಿ. ಖಂಡ್ರೆ ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಸಂಜೆ 4.30ಕ್ಕೆ ಸಮಾರೋಪ ನಡೆಯಲಿದ್ದು ದಾವಣಗೆರೆ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಬೆಂಗಳೂರಿನ ಭವತಾರಿಣಿ ಆಶ್ರಮದ ಮಾತಾಜಿ ವಿವೇಕಮಯಿ ಸಮ್ಮುಖ ಸಚಿವ ಕೆ.ಎಚ್. ಮುನಿಯಪ್ಪ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಾರೋಪ ಭಾಷಣ ಮಾಡುವರು’ ಎಂದು ಮಂಜುನಾಥ್ ಹೇಳಿದರು.

ಭಜನಾ ಮೇಳದ ಸಮಾರೋಪದಲ್ಲಿ ‘30ರಂದು ಬೆಳಿಗ್ಗೆ 10ಕ್ಕೆ ಭಜನಾ ಮೇಳ ಸಮಾರೋಪದಲ್ಲಿ ಶ್ರೀರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದ ಮತ್ತು ಮಣಕವಾಡ ಅನ್ನದಾನೀಶ್ವರ ದೇವಮಂದಿರ ಮಹಾಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ ಸಮ್ಮುಖ ವಹಿಸುವರು. ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅಧ್ಯಕ್ಷತೆ ವಹಿಸಲಿದ್ದು ಆರ್ಎಸ್ಎಸ್ ಸರಕಾರ್ಯವಾಹಕ ದತ್ತಾತ್ರೇಯ ಹೊಸಬಾಳೆ ಸಮಾರೋಪ ಭಾಷಣ ಮಾಡುವರು. ಸಚಿವರಾದ ಎನ್.ಎಸ್. ಬೋಸರಾಜು ಆರ್.ವಿ. ದೇಶಪಾಂಡೆ ಪಾಲ್ಗೊಳ್ಳುವರು’ ಎಂದು ಮಂಜುನಾಥ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.