ಕೊಳ್ಳೇಗಾಲ: ಮಲೈ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮೀಜಿಗೆ ಇಲ್ಲಿನ ಮಾನಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗಳು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಕಾಲೇಜು ಆವರಣದಲ್ಲಿ ಮಂಗಳವಾರ ಸ್ವಾಮೀಜಿ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಅರ್ಪಿಸಿ, ಕೆಲಕಾಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಮೌನ ಆಚರಣೆ ಮಾಡಿ ಚಿರಶಾಂತಿ ಕೋರಿದರು.

ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಮಾತನಾಡಿ, ‘ಸ್ವಾಮೀಜಿ ಅಗಲಿಕೆ ತುಂಬಲಾರದ ನಷ್ಟ. ಅವರು ಮಾನಸ ಶಿಕ್ಷಣ ಸಂಸ್ಥೆ ಮೇಲೆ ಇಟ್ಟಿದ್ದ ಪ್ರೀತಿ, ವಿಶ್ವಾಸ, ಹಾರೈಕೆ ನಮ್ಮನ್ನು ಸದಾ ಕಾಲ ಕಾಪಾಡುತ್ತದೆ. ಶ್ರೀಗಳು ಮಾಡಿರುವ ಅಭಿವೃದ್ಧಿ ಕೆಲಸಗಳು, ಸಮಾಜಮುಖಿ ಕೆಲಸ ಅವರನ್ನು ಸದಾ ಜೀವಂತವಾಗಿರಿಸುತ್ತದೆ’ ಎಂದರು.

ಮೈಸೂರು ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶಿವರಾಜಪ್ಪ, ಕಾಲೇಜಿನ ವಿಶೇಷ ಅಧಿಕಾರಿ ಡಾ.ಆರ್. ನಾಗಭೂಷಣ್, ಪ್ರಾಂಶುಪಾಲ ಕೃಷ್ಣೇಗೌಡ, ಧನಂಜಯ, ಚನ್ನಶೆಟ್ಟಿ, ಡಾ.ಈ.ಜಗದೀಶ್ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.