ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿ.ನರಸೀಪುರ ಅಪಘಾತ: ಗಾಯಗೊಂಡಿದ್ದ ಯುವಕ ಕೊನೆಯುಸಿರು, ಸಾವಿನ ಸಂಖ್ಯೆ 11ಕ್ಕೆ

Published 2 ಜೂನ್ 2023, 5:16 IST
Last Updated 2 ಜೂನ್ 2023, 5:16 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇಲ್ಲಿನ ಕೆ.ಆರ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್ (24) ಶುಕ್ರವಾರ ನಿಧನರಾದರು. ಅವರ ತಾಯಿ ಸರೋಜಾ ಹಾಗೂ ತಂದೆ ಕೊಟ್ರೇಶ್ ಅಪಘಾತದಲ್ಲಿ ಮೃತರಾಗಿದ್ದರು. ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದರು. ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿತ್ತು. ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದವರು ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದರು.

ಇದನ್ನೂ ಓದಿ: ತಿ.ನರಸೀಪುರ: ಇಕ್ಕಟ್ಟಿನ ತಿರುವು ತರುವ ಅಪಾಯ- ಮಾರಣಾಂತಿಕವಾದ ರಾಷ್ಟ್ರೀಯ ಹೆದ್ದಾರಿ 766

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT