ತಿ.ನರಸೀಪುರ: ‘ವಚನಗಳ ಮೂಲಕ ಜನಸಾಮಾನ್ಯರಿಗೆ ಬದುಕಿನ ಸಂದೇಶ ನೀಡಿದ ಕಾಯಕ ಯೋಗಿ ಬಸವಣ್ಣ, 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದರು’ ಎಂದು ತಹಶೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ಹೇಳಿದರು.

ತಾಲ್ಲೂಕು ಆಡಳಿತ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಸಹಯೋಗದಲ್ಲಿ ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೌಢ್ಯ ಆಚರಣೆ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ವಿರೋಧಿಸಿದ್ದ ಬಸವಣ್ಣನವರು, 12ನೇ ಶತಮಾನದಲ್ಲೇ ಅನುಭವ ಮಂಟಪದಲ್ಲಿ ಎಲ್ಲ ಸಮುದಾಯಗಳ ಜನರಿಗೆ ಪ್ರಾತಿನಿಧ್ಯ ನೀಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ವೇದಿಕೆ ಕಲ್ಪಿಸಿದ್ದರು. ಸಮಾಜದಲ್ಲಿ ಪರಿವರ್ತನೆ ತರಲು ಸಂಕಲ್ಪ ಮಾಡಿ, ವಚನ ಮತ್ತು ಕಾರ್ಯಗಳ ಮೂಲಕ ಸಾರಿದ್ದಾರೆ. ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಕೊಳ್ಳಬೇಕಿದೆ ಎಂದರು.

ಮುಖ್ಯಭಾಷಣಕಾರ ಬಿಆರ್ಸಿ ನಾಗೇಶ್ ಮಾತನಾಡಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ವಕೀಲ ಜಯದೇವಣ್ಣ, ವೈದ್ಯ ಡಾ.ಬಸವಣ್ಣ, ಯುವ ಕೃಷಿ ವಿಜ್ಞಾನಿ ನಿರಂಜನ್ ಪ್ರಸಾದ್, ವೀರಶೈವ ಮುಖಂಡ ರಾಜಣ್ಣ, ಪ್ರಗತಿಪರ ರೈತ ನಾಗೇಂದ್ರಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಎಸ್ಎಂಆರ್ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕುರುಬೂರು ಶಿವಶಂಕರ್, ಯುವ ಘಟಕ ಅಧ್ಯಕ್ಷ ಕೈಯಂಬಳ್ಳಿ ಅಶೋಕ್, ತಾ.ಪಂ ಇಒ ಡಾ.ಕೆ.ರಂಗಸ್ವಾಮಿ, ಬಿಇಒ ಶಿವಮೂರ್ತಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಕೆಂಪರಾಜು, ಸಿಡಿಪಿಒ ಗೋವಿಂದರಾಜು, ಪುರಸಭೆ ಮುಖ್ಯಾಧಿಕಾರಿಗಳಾದ ಸತೀಶ್, ಶ್ರೀನಿವಾಸ್, ಬಾಬು ಜಗಜೀವನ್ ರಾಂ ಸಂಘದ ಮಾಜಿ ಅಧ್ಯಕ್ಷ ಮೂಗೂರು ಸಿದ್ದರಾಜು, ಕರೋಹಟ್ಟಿ ಪ್ರಭುಸ್ವಾಮಿ, ಆಲಗೂಡು ಶಿವಕುಮಾರ್, ಹಿರಿಯೂರು ನವೀನ್ ಮುಖಂಡರಾದ ಸಿದ್ದಲಿಂಗಸ್ವಾಮಿ, ಸಿದ್ದಲಿಂಗಮೂರ್ತಿ, ಮನ್ಸೂರ್ ಆಲಿ, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ಪ್ರಭುಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-38-629803336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.