ತಿ.ನರಸೀಪುರ: ತಾಲ್ಲೂಕಿನ ಮಾಡ್ರಳ್ಳಿ ಗ್ರಾಮದ ಪಟ್ಟದ ಮಠದ ಚನ್ನಮಲ್ಲಿಕಾರ್ಜುನ ಸ್ವಾಮಿಗಳವರ ಸುವರ್ಣ ಪುಣ್ಯಸ್ಮರಣೋತ್ಸವವನ್ನು ಗ್ರಾಮದಲ್ಲಿ ಮಾರ್ಚ್ 26ರಂದು ಬೆಳಿಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಎಸ್ಜಿಸಿಎಂ ಶಾಲೆಯಲ್ಲಿ ಶನಿವಾರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ತುಮಕೂರು ಸಿದ್ಧಗಂಗಾ ಕ್ಷೇತ್ರದ ಸಿದ್ಧಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ದಾಸೋಹ ಮಠದ ಮಹಾಂತ ಸ್ವಾಮೀಜಿ, ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಭಾಗವಹಿಸುವರು. ವಿವಿಧ ಸ್ವಾಮೀಜಿಗಳ ಭಾವಚಿತ್ರಗಳ ಅನಾವರಣ, ಸಾಧಕರ ಸನ್ಮಾನ ನಡೆಯಲಿದೆ’ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಪುಟ್ಟಬುದ್ದಿ, ಶಿವಕುಮಾರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಬಜ್ಜಿಲಿಂಗಪ್ಪ, ಎಸ್ಜಿಸಿಎಂ ವಿದ್ಯಾ ಸಂಸ್ಥೆಯ ನಂಜುಂಡಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-38-495123783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.