ತಿ.ನರಸೀಪುರ: ಕಾರ್ಮಿಕರ ಬದುಕಿಗೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆ ಖಂಡಿಸಿ ಬುಧವಾರ ಕಾರ್ಮಿಕ ಮುಖಂಡರು ಕೇಂದ್ರ ಗೆಜೆಟ್ ಪತ್ರಗಳನ್ನು ಸುಡುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆ ಎದುರು ಕೇಂದ್ರ ಗೆಜೆಟ್ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಡಿವೈಎಫ್ಐ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ, ‘ಕೇಂದ್ರದ ಬಿಜೆಪಿ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ರೂಪಿಸಿ ಮೇ 8ರಂದು ಗೆಜೆಟ್ ಪ್ರಕಟಣೆ ಹೊರಡಿಸಿದೆ. ಸಿಐಟಿಯು ಹಾಗೂ ಇತರೆ ಕಾರ್ಮಿಕ ಸಂಘಟನೆಗಳು ಸೂಚಿಸಿದ ಯಾವುದೇ ತಿದ್ದುಪಡಿಗಳನ್ನು ಅಂಗೀಕರಿಸದೇ ಹಾಗೂ ಈ ಬಗ್ಗೆ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸದೇ ಎಲ್ಲಾ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ, ನಿಯಮಗಳನ್ನು ರೂಪಿಸಿದೆ’ ಎಂದು ದೂರಿದರು.

ಕಾರ್ಮಿಕ ಕಾನೂನುಗಳು ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ, ರಾಜ್ಯಗಳೂ ಕೂಡಲೇ ನಿಯಮಗಳನ್ನು ರೂಪಿಸುವಂತೆ ಅವುಗಳ ಮೇಲೆ ಒತ್ತಡ ಹೇರಲಾಗಿದೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಗೆದ್ದ ನಂತರ ಈ ಕಪಟ ಮತ್ತು ವಂಚನೆಯ ಕ್ರಮ ಕಾರ್ಮಿಕ ವರ್ಗದ ಮೇಲೆ ಹರಿಬಿಟ್ಟಿದೆ ಎಂದು ಆರೋಪಿಸಿದರು.

ಈಗ ಅಂಗೀಕರಿಸಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳು ಹಾಗೂ ಸವಲತ್ತುಗಳನ್ನು ನಾಶಮಾಡುವ ಕ್ರಮವಾಗಿದೆ. ಬಂಡವಾಳಗಾರರು ಮಾಡುತ್ತಿದ್ದ ಎಲ್ಲಾ ಕಾನೂನು ಉಲ್ಲಂಘನೆಗಳನ್ನು ಕಾನೂನುಬದ್ಧಗೊಳಿಸಲಾಗಿದೆ. ದೇಶದ ಯುವ ಜನತೆಗೆ ಕಾಯಂ ಉದ್ಯೋಗದ ಅವಕಾಶ ಇಲ್ಲದಂತೆ ಮಾಡಿ, ಅವರ ಬದುಕನ್ನು ಅತಂತ್ರಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಮಿಕ ಮುಖಂಡರಾದ ಎಸ್. ಶಾಂತಮೂರ್ತಿ, ಕೆಂಪಯ್ಯನಹುಂಡಿ ಪುಟ್ಟಸ್ವಾಮಿ, ಮಹದೇವಮ್ಮ ನಿಲಸೋಗೆ ಸಿದ್ದರಾಜು, ಗೌರಮ್ಮ, ನಾಗಮ್ಮ, ಸುಮ, ನಾಗರತ್ನಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-37-613242530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.