ತಿ.ನರಸೀಪುರ: ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ ಪಟ್ಟಣದಲ್ಲಿ ಈಚೆಗೆ ನಡೆಯಿತು.

ತಾಲ್ಲೂಕು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷರಾಗಿ ಕೆ.ಎಸ್.ಲಿಂಗರಾಜು, ಗೌರವಾಧ್ಯಕ್ಷ–ರಾಜಣ್ಣ, ಉಪಾಧ್ಯಕ್ಷ– ಶ್ರೀನಿವಾಸ್, ಮಹಿಳಾ ಉಪಾಧ್ಯಕ್ಷ–ವಿ.ರೇಣುಕಾ, ಪ್ರಧಾನ ಕಾರ್ಯದರ್ಶಿ–ಅಮ್ಜದ್ ಪಾಷ, ಖಜಾಂಚಿ–ಸಿ.ಪುಟ್ಟಸ್ವಾಮಿ, ಸಂಘಟನಾ ಕಾರ್ಯದರ್ಶಿ–ಮಹದೇವು, ಮಹಿಳಾ ಸಂಘಟನಾ ಕಾರ್ಯದರ್ಶಿ–ಆರ್.ನಿರ್ಮಲಾ, ಸಾಂಸ್ಕೃತಿಕ ಕಾರ್ಯದರ್ಶಿ–ಬಿ.ಶಿಲ್ಪ ಹಾಗೂ ಕ್ರೀಡಾ ಕಾರ್ಯದರ್ಶಿ–ಕೆ.ಪಿ.ಕೆಂಪೇಗೌಡ ಆಯ್ಕೆಯಾದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಪ್ರಕಾಶ್ ಮಾತನಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಿತ ಕಾಪಾಡಲು, ಕ್ಷೇಮಾಭಿವೃದ್ಧಿ ಸಂಘವು ಕಾರ್ಯ ನಿರ್ವಹಿಸಲಿದ್ದು, ಆಂತರಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಪೂರಕವಾಗಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸಿ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಘಟಿತರಾಗಿ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಲು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಗೌರವಾಧ್ಯಕ್ಷ ಎಸ್.ಧರ್ಮೇಂದ್ರ, ಖಜಾಂಚಿ ಮಹದೇವ ನಾಯಕ, ಮಹಿಳಾ ಉಪಾಧ್ಯಕ್ಷೆ ಟಿ. ಸೌಮ್ಯಲತಾ, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಇಷ್ಹಾಕ್, ತಾಯೂರು ಪಿಡಿಓ ಟಿ.ಎಂ.ಮಹೇಶ, ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-38-1504618024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.