ತಿ.ನರಸೀಪುರ: ಪೌರಕಾರ್ಮಿಕರ ಹಿತಾಸಕ್ತಿ ಕಾಪಾಡಲು ಪೂರಕ ಸೌಲಭ್ಯಗಳನ್ನು ಸಮರ್ಪಕವಾಗಿ ದೊರಕಿಸಿಲು ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಶಂಕರ ಅಂಕನಶೆಟ್ಟಿಪುರ ಹೇಳಿದರು.

ರಾಜ್ಯ ಸಫಾಯಿ ಕರ್ಮಾಚಾರಿ ಆಯೋಗದ ಸದಸ್ಯರು ಹಾಗೂ ಪೌರ ಕಾರ್ಮಿಕರೊಂದಿಗೆ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಕಾರ್ಮಿಕರ ಮಾಹಿತಿ ಪಡೆದು ಅವರು ಮಾತನಾಡಿದರು.

‘ಪಟ್ಟಣದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಅವರ ಸಮಸ್ಯೆಗಳ ನಿವಾರಣೆಗೆ ಗಮನ ಹರಿಸಬೇಕು’ ಎಂದರು.

ಪೌರ ಕಾರ್ಮಿಕರು ತಮ್ಮ ಸೇವಾ ಭದ್ರತೆ, ವೇತನ, ಆರೋಗ್ಯ ವಿಮೆ, ವಸತಿ ಸೌಲಭ್ಯ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ವಿಶೇಷವಾಗಿ ಸ್ಮಶಾನ ಭೂಮಿ, ನಿವೇಶನ ಹಂಚಿಕೆ ಹಾಗೂ ಸಮುದಾಯ ಭವನ ನಿರ್ಮಾಣದ ಬೇಡಿಕೆ ಸಲ್ಲಿಸಿದರು. ವಿವಿಧ ಸಮಸ್ಯೆಗಳ ಬಗ್ಗೆ ಗಮನಕ್ಕೆ ಸೆಳೆದರು.

‘ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಂಕರ ಅಂಕನಶೆಟ್ಟಿಪುರ ಭರವಸೆ ನೀಡಿದರು.

‘ಪೌರಕಾರ್ಮಿಕ ಕುಟುಂಬಗಳಿಗೆ ಸರ್ಕಾರದಿಂದ ನಿವೇಶನ ಹಂಚಿಕೆ ಮಾಡಬೇಕು, ಸಮುದಾಯ ಭವನಕ್ಕೆ ಸ್ಥಳ ಗುರುತಿಸಲಾಗಿದ್ದರೂ ಭವನ ನಿರ್ಮಾಣ ಕಾರ್ಯ ನಡೆದಿಲ್ಲ, ಕೂಡಲೇ ಕಾಮಗಾರಿ ಆರಂಭಿಸಲು ಕ್ರಮವಹಿಸಬೇಕು’ ಎಂದು ಎಂದು ಆಗ್ರಹಿಸಿದರು.

ಮನವಿ ಆಲಿಸಿದ ಬಳಿಕ ಸಫಾಯಿ ಕರ್ಮಾಚಾರಿ ಆಯೋಗದ ಸದಸ್ಯರು, ಮುಖ್ಯಾಧಿಕಾರಿ ಶ್ರೀನಿವಾಸ್ ಹಾಗೂ ತಹಶೀಲ್ದಾರ್ ಟಿ. ಜೆ.ಸುರೇಶಾಚಾರ್ ಅವರು ಬೇಡಿಕೆಗಳನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹಾರಕ್ಕೆ ಅಗತ್ಯ ಕ್ರಮ ವಹಿ ಸುತ್ತೇವೆ’ ಎಂದು ಭರವಸೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ‘ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಗತ್ಯ ಸುರಕ್ಷತಾ ಪರಿಕರಗಳು, ಆರೋಗ್ಯ ತಪಾಸಣೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪುರಸಭೆಯಿಂದ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಿದ್ದರೂ ಕೆಲ ಕಾರ್ಮಿಕರು ಗ್ಲೌಸ್ ಮತ್ತು ಶೂಗಳನ್ನು ಬಳಸದಿರುವ ಬಗ್ಗೆ ಆಕ್ಷೇಪಗಳಿವೆ. ಪೌರಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಧರಿಸಿ ಕೆಲಸ ನಿರ್ವಹಿಸಬೇಕು’ ಎಂದು ಸೂಚಿಸಿದರು.

ತಹಸೀಲ್ದಾರ್ ಟಿ.ಜೆ.ಸುರೇಶಾಚಾರ್ ಮಾತನಾಡಿ, ‘ಪೌರಕಾರ್ಮಿಕರು ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ, ಲಸಿಕೆ ಪಡೆಯುವುದು ಹಾಗೂ ವೈದ್ಯರ ಸಲಹೆಗಳನ್ನು ಪಾಲಿಸುವುದು ಅಗತ್ಯ’ ಎಂದು ತಿಳಿಸಿದರು.

ಕಚೇರಿ ವ್ಯವಸ್ಥಾಪಕ ಮಹೇಂದ್ರ, ಸಮುದಾಯ ಸಂಘಟನಾಧಿಕಾರಿ ನಳಿನಿ, ಹಿರಿಯ ಆರೋಗ್ಯ ನಿರೀಕ್ಷಕಿ ಚಂಪಾಶ್ರೀ, ಕಂದಾಯಾಧಿಕಾರಿ ತ್ರಿವೇಣಿ, ಕಂದಾಯ ನಿರೀಕ್ಷಕ ಅಶೋಕ್, ಆಶಾ, ಗೋಪಾಲ್, ನಿಂಗರಾಜು, ಸ್ಯಾನಿಟರಿ ಸೂಪರ್ ವೈಸರ್ ಪ್ರಸನ್ನ, ಪೌರಕಾರ್ಮಿಕರಾದ ಶಿವಣ್ಣ, ಸೋಮ, ಮಹದೇವ, ಸರೋಜಾ, ಜ್ಯೋತಿ, ಭಾಗ್ಯ, ಗಣೇಶ್, ಸತೀಶ, ನಿಂಗರಾಜು, ಮನೋಜ್, ಮಣಿರಾಜು, ನವೀನ್ ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-38-97320859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.