ತಿ.ನರಸೀಪುರ: ‘ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಏಳಿಗೆ ಸಹಿಸದೇ ವಿರೋಧ ಪಕ್ಷಗಳು ಸರ್ಕಾರ ಲೂಟಿ ಮಾಡುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ’ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಮುಖಂಡ ಎಂ. ರಮೇಶ್ ಹೇಳಿದರು.

‘ಸರ್ಕಾರ ಲೂಟಿ ಮಾಡಿದೆ ಎನ್ನುವುದಾದರೆ ಸಾಕ್ಷಿಗಳನ್ನು ಸಾರ್ವತ್ರಿಕವಾಗಿ ತೆರೆದಿಡಿ. ರಾಜ್ಯಪಾಲರಿಗೆ ದೂರು ನೀಡಿ ಅಧಿವೇಶನದಲ್ಲಿ ಚರ್ಚಿಸಿ ದಾಖಲೆಗಳನ್ನು ನೀಡಿ. ಅದು ಬಿಟ್ಟು ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರವನ್ನು ವಿನಾಕಾರಣ 2023ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರು ಬಜೆಟ್ಗಳಲ್ಲಿ ಹೆಚ್ಚು ಹೆಚ್ಚು ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಇದನ್ನು ಸಹಿಸದೆ ವಿರೋಧ ಪಕ್ಷಗಳು ಮಾತನಾಡುವುದು ತರವಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಯಾವುದೇ ವರ್ಗಾವಣೆಗೆ ದಂಧೆ ಮಾಡುತ್ತಿಲ್ಲ. ಅದರ ಅಗತ್ಯವೂ ಅವರಿಗಿಲ್ಲ. ಮುಖ್ಯಮಂತ್ರಿ ಪುತ್ರನಾಗಿ ಕ್ಷೇತ್ರದ ಕಾರ್ಯಕರ್ತರ ಮನವಿಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಪಕ್ಷದ ಸರ್ಕಾರ ಬಂದರೂ ಆ ಪಕ್ಷದ ನಾಯಕರು ಕಾರ್ಯಕರ್ತರ ಮನವಿ ಸ್ಪಂದಿಸುವುದು ಸಾಮಾನ್ಯ’ ಎಂದು ಹೇಳಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-1249156677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.