ಸಚಿವ ಎಸ್.ಟಿ.ಸೋಮಶೇಖರ್ ಟಾಂಗಾ ಸವಾರಿ
ಮೈಸೂರು: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ರಾತ್ರಿ ಟಾಂಗಾ ಸವಾರಿ ಮಾಡಿ ದೀಪಾಲಂಕಾರ ವ್ಯವಸ್ಥೆಯನ್ನು ವೀಕ್ಷಿಸಿದರು.
ಸರ್ಕಾರಿ ಅತಿಥಿ ಗೃಹದಿಂದ ಹೇಮಚಂದ್ರ ವೃತ್ತ, ಜಯಚಾಮರಾಜೇಂದ್ರ ಒಡೆಯರ್ ವೃತ್ತ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ, ವಿಶ್ವೇಶ್ವರಯ್ಯ ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಂಚೆ ಕಚೇರಿ ವೃತ್ತದ ಮಾರ್ಗದಲ್ಲಿ ತೆರಳಿದರು.
ಮೈಸೂರು: ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ರಾತ್ರಿ ಟಾಂಗಾ ಸವಾರಿ ಮಾಡಿ ದೀಪಾಲಂಕಾರ ವ್ಯವಸ್ಥೆಯನ್ನು ವೀಕ್ಷಿಸಿದರು. pic.twitter.com/E3SeI2sCnl
— Prajavani (@prajavani) September 29, 2022
‘ದಸರಾ ವೀಕ್ಷಣೆಗೆ ದೇಶ–ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ಬಾರಿ ಅದ್ಧೂರಿಯಾಗಿ ದೀಪಾಲಂಕಾರ ಮಾಡಲಾಗಿದೆ. ಟಾಂಗಾದಲ್ಲಿ ಸವಾರಿ ಮಾಡಿ ದೀಪಾಲಂಕಾರ ವೀಕ್ಷಿಸಿದರೆ, ನಗರದ ಸೊಬಗನ್ನು ಕಣ್ತುಂಬಿಕೊಳ್ಳುವ ಜೊತೆಗೆ ಟಾಂಗಾ ಸವಾರಿಗೂ ಉತ್ತೇಜನ ನೀಡಿದಂತಾಗುತ್ತದೆ. ಇದಕ್ಕಾಗಿ ಟಾಂಗಾ ಸವಾರಿ ಮಾಡಿದೆ’ ಎಂದು ಸಚಿವರು ಹೇಳಿದರು.
ಬಳಿಕ ಟಾಂಗಾ ಮಾಲೀಕರಿಗೆ ಉಡುಗೊರೆ ನೀಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಕೂಡ ಟಾಂಗಾ ಸವಾರಿ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.