ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೀಪಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Published 5 ಸೆಪ್ಟೆಂಬರ್ 2024, 14:53 IST
Last Updated 5 ಸೆಪ್ಟೆಂಬರ್ 2024, 14:53 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯಲ್ಲಿ ಶಿಕ್ಷಕರ ದಿನವನ್ನು ಗುರುವಾರ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿದ್ಯಾವರ್ಧಕ ಕಾಲೇಜು ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ವಿಭಾಗದ ನಿವೃತ್ತ ನಿರ್ದೇಶಕ ಎನ್.ಕೆ.ರಾಮಚಂದ್ರ ಗೌಡ ಮಾತನಾಡಿ, ‘ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ರಾಮಪ್ಪ ಎಂ, ‘ಗುಡಿಯ ಬದಲಿಗೆ ಶಾಲೆ ಕಟ್ಟಿದರೆ ಸಮಾಜಕ್ಕೆ ತುಂಬಾ ಉಪಕಾರಿಯಾಗುತ್ತದೆ’ ಎಂದು ತಿಳಿಸಿದರು.

ಸಂಸ್ಥೆಯಲ್ಲಿ ಸುದೀರ್ಘ ಕಾಲ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ನಿರ್ದೇಶಕಿ ನಿವೇದಿತಾ ಸುವರ್ಣ, ದೀಪಾ ಸಂಯುಕ್ತ ಪಿಯು ಕಾಲೇಜಿನ ಪ್ರಾಂಶುಪಾಲೆ ಪ್ರಣಿತಾ ಎರ್ಮಾಳ್, ದೀಪಾ ಪ್ರೌಢಶಾಲೆ ಮುಖ್ಯಶಿಕ್ಷಕಿ ಶಿಲ್ಪಾ ಜಗದೀಶ್, ಸಹ ಮುಖ್ಯ ಶಿಕ್ಷಕಿ ತುಳಸಿ ಹಾಗೂ ಸಂಯೋಜಕ ರವಿಶಂಕರ್ ಪಾಲ್ಗೊಂಡಿದ್ದರು.

ಮೈಸೂರು ಟ್ರಾವಲ್ಸ್‌ ಸಂಘ ಸ್ಕಾಲ್‌ ಇಂಟರ್‌ನ್ಯಾಷನಲ್‌ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಿರಿಯ ಶಿಕ್ಷಕರಾದ ರಾಜು ಹಾಗೂ ಶಶಿಕಲಾ ಅವರನ್ನು ಸನ್ಮಾನಿಸಲಾಯಿತು.

ಮೈಸೂರು ಟ್ರಾವಲ್ಸ್‌ ಸಂಘ ಸ್ಕಾಲ್‌ ಇಂಟರ್‌ನ್ಯಾಷನಲ್‌ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಿರಿಯ ಶಿಕ್ಷಕರಾದ ರಾಜು ಹಾಗೂ ಶಶಿಕಲಾ ಅವರನ್ನು ಸನ್ಮಾನಿಸಲಾಯಿತು.

ಸುಯೋಗ ಸಮೂಹ ಶಿಕ್ಷಣ ಸಂಸ್ಥೆಯಿಂದ ರಾಮಕೃಷ್ಣ ನಗರದ ಸುಯೋಗ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನವನ್ನು ಗುರುವಾರ ಆಚರಿಸಲಾಯಿತು.

ಸುಯೋಗ ಸಮೂಹ ಶಿಕ್ಷಣ ಸಂಸ್ಥೆಯಿಂದ ರಾಮಕೃಷ್ಣ ನಗರದ ಸುಯೋಗ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನವನ್ನು ಗುರುವಾರ ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT