ಮೈಸೂರು: ‘ಆಡಳಿತದಲ್ಲಿರುವ ಯಾವುದೇ ಸರ್ಕಾರಗಳು ತಮ್ಮ ಸಿದ್ಧಾಂತವನ್ನು ಪಠ್ಯದಲ್ಲಿ ಹೇರುವುದನ್ನು ನಿಷೇಧಿಸಬೇಕು’ ಎಂದು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದರು.

ಇಲ್ಲಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ಪಠ್ಯಕ್ರಮ ಪರಿಷ್ಕರಣೆಯು ಆಡಳಿತ ವ್ಯವಸ್ಥೆಗೆ ಸೀಮಿತವಾಗಬಾರದು. ಇದಕ್ಕೆಂದೇ ಪ್ರತ್ಯೇಕವಾಗಿ ಸಮಿತಿ ರಚಿಸಬೇಕು. ನಾನು ಶಿಕ್ಷಣ ಸಚಿವನಾಗಿದ್ದಾಗ ಗಣಿತವಿಜ್ಞಾನ ಮತ್ತು ವಿಜ್ಞಾನ ಪುಸ್ತಕಗಳನ್ನು ಹೊಸದಾಗಿ ತಂದಿದ್ದೆ. ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಯಿತು’ ಎಂದು ತಿಳಿಸಿದರು.

‘ಆಧುನಿಕ ಕಾಲಕಟ್ಟದಲ್ಲಿ ಶಿಕ್ಷಣ ಕ್ಷೇತ್ರವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು. ಶಿಕ್ಷಣವು ರಾಜಕೀಯ, ಆಡಳಿತ ವ್ಯವಸ್ಥೆಯಿಂದ ದೂರವಿದ್ದು ಮಾನವ ಕುಲಕ್ಕೆ ನೆರವಾಗುವಂತಿರಬೇಕು, ಮಾನವೀಯತೆ ಕಲಿಸಬೇಕು ಹಾಗೂ ಪ್ರಕೃತಿ ನಿಯಮದಂತೆ ಜೀವನ ನಡೆಸುವ ಮಾರ್ಗ ತೋರಿಸುವ ಸಾಧನವಾಗಬೇಕು. ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

ಶಾಲೆ ದುರಸ್ತಿಗೆ: ‘ತಮ್ಮ ಕ್ಷೇತ್ರಾಭಿವೃದ್ಧಿ ನಿಧಿ ₹ 2 ಕೋಟಿಯಲ್ಲಿ ಹೊಸ ಕಾಮಗಾರಿಗೆ ಹಾಗೂ ಸರ್ಕಾರಿ ಶಾಲೆಗಳಿಗೆ ವಿನಿಯೋಗ ಮಾಡಲು ಅವಕಾಶ ಇರಲಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಶೇ.30ರಷ್ಟು ಅನುದಾನವನ್ನು ಶಾಲೆಗಳ ದುರಸ್ತಿ ಮತ್ತು ಮೂಲ ಸೌಕರ್ಯ ಕಲ್ಪಿಸುವ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಖರ್ಚು ಮಾಡಬೇಕು ಎಂದು ಅಧಿಸೂಚನೆ ಹೊರಡಿಸುವಂತೆ ಕ್ರಮ ಕೈಗೊಂಡಿದ್ದೆ’ ಎಂದು ನೆನೆದರು.

‘ಆದರೆ, ಮುಖ್ಯಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಲ್ಲಿರುವ ಮೂಲ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಬೇಡಿಕೆಗಳನ್ನು ಸಲ್ಲಿಸುತ್ತಿಲ್ಲ. ಇದರಿಂದ ಇನ್ನೂ ಅನೇಕ ಶಾಲೆಗಳಿಗೆ ಮೂಲ ಸೌಕರ್ಯಗಳಿಲ್ಲದೇ ಸೊರಗುತ್ತಿವೆ. ಮೂರು ವರ್ಷಗಳಿಂದ ನನಗೆ ಸರ್ಕಾರದಿಂದ ಬಂದ ಪೂರ್ಣ ಅನುದಾನವನ್ನು ಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೆ ಕೊಟ್ಟಿದ್ದೇನೆ. ಕೆಲವೇ ವರ್ಷಗಳಲ್ಲಿ ನನ್ನ ಕ್ಷೇತ್ರದ ಎಲ್ಲ ಶಾಲೆಗಳಿಗೆ ಸೌಕರ್ಯಗಳು ದೊರೆಯಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಣದ ಜೊತೆಗೆ ಮೌಲ್ಯ ಕಲಿಸಿ: ‘ಮಕ್ಕಳು ಪಾಲಕರಿಗಿಂತಲೂ ಹೆಚ್ಚಿನ ಸಮಯವನ್ನು ಶಾಲೆಗಳಲ್ಲಿ ಶಿಕ್ಷಕರೊಂದಿಗೆ ಕಳೆಯುತ್ತಾರೆ. ಅವರಿಗೆ ಕೇವಲ ಶಿಕ್ಷಣ ನೀಡುವುದರಿಂದ ಬದಲಾವಣೆ ಸಾಧ್ಯವಿಲ್ಲ. ಹೀಗಾಗಿ ಅವರಿಗೆ ಪಠ್ಯದೊಂದಿಗೆ ನೈತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಬೇಕು’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ‘ಶಿಕ್ಷಣ ಎಲ್ಲರ ವಿಮೋಚನಾ ಅಸ್ತ್ರ. ದೇಶ ಕಾಯುವ ಸೈನಿಕ, ಅನ್ನ ಕೊಡುವ ರೈತ, ಆರೋಗ್ಯ ಸುಧಾರಿಸುವ ವೈದ್ಯರು ಮತ್ತು ಬಾಳಿಗೆ ಬೆಳಕಾಗುವ ಶಿಕ್ಷಕರನ್ನು ಸದಾ ಸ್ಮರಿಸಬೇಕು’ ಎಂದು ನುಡಿದರು.

ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ, ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ, ಡಿಡಿಪಿಐ ಎಸ್.ಟಿ. ಜವರೇಗೌಡ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸೋಮೇಗೌಡ ಹಾಜರಿದ್ದರು.

ಇದಕ್ಕೂ ಮುನ್ನ ಹಳೆಯ ಜಿಲ್ಲಾಧಿಕಾರಿ ಕಚೇರಿಯಿಂದ ಕಲಾಮಂದಿರದವರೆಗೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಫೋಟೊ ಮೆರವಣಿಗೆ ನಡೆಯಿತು.

‘ಮೊಬೈಲ್ ಫೋನ್ ಗೀಳು ಬಿಡಿಸಿ’

ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ ‘ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದನ್ನು ನಾನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದು ಒಳಮೀಸಲಾತಿ ಜಾರಿಯಾದ ನಂತರ ಹುದ್ದೆಗಳನ್ನು ತುಂಬುವುದಾಗಿ ಭರವಸೆ ನೀಡಿದ್ದಾರೆ’ ಎಂದರು. ‘ನನ್ನ ವಿದ್ಯಾರ್ಜನೆಗೆ ಸಣ್ಣಪ್ಪ ಎಂಬ ಶಿಕ್ಷಕರು ನೆರವಾದರು. ಮನೆಯಲ್ಲಿ ಕಷ್ಟವಿದ್ದ ಸಂದರ್ಭದಲ್ಲಿ ಶಾಲಾ ಶುಲ್ಕ ಕಟ್ಟಲಾಗದೆ ವಿದ್ಯಾಭ್ಯಾಸ ನಿಲ್ಲಿಸುವ ಸಂದರ್ಭದಲ್ಲಿ ಅವರು ಶುಲ್ಕ ಕಟ್ಟಿ ಓದಿಸಿದರು. ಆ ಕಾರಣದಿಂದ ನಾನೀಗ ಸಮಾಜದಲ್ಲಿ ಒಳ್ಳೆಯ ಸ್ಥಾನಕ್ಕೆ ಬಂದಿದ್ದೇನೆ’ ಎಂದು ಸ್ಮರಿಸಿದರು. ‘ವಿದ್ಯಾರ್ಥಿಗಳನ್ನು ಐಎಎಸ್ ಕೆಎಎಸ್ ಸೇರಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವವರೇ ಶಿಕ್ಷಕರು. ಶಿಕ್ಷಣದ ಜೊತೆಗೆ ಸಂಸ್ಕೃತಿಯನ್ನೂ ಅವರು ಕಲಿಸುತ್ತಾರೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆಯ ಗೀಳು ಬಿಡಿಸಲು ಈಗಿನ ಶಿಕ್ಷಕರು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.