ಮೈಸೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಪಿಸಿಎಆರ್) ನಿವೃತ್ತ ನಿರ್ದೇಶಕ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ ಸಾವಿನ ಕುರಿತ ಪ್ರಕರಣವು ಕುಟುಂಬದ ಆಕ್ಷೇಪಣೆ ಇಲ್ಲದ ಕಾರಣ ಮುಕ್ತಾಯವಾಗಿದೆ.

ಈ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ‘ಕೆಲವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಕುಟುಂಬದವರು ಅವನ್ನು ಅಲ್ಲಗಳೆದಿದ್ದು, ಅಸಹಜ ಸಾವು ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿವೆ.

ಅಯ್ಯಪ್ಪನ್ ಅವರ ಮೃತದೇಹವು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಶನಿವಾರ (ಮೇ.10) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರು ಮೇ.7 ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದರು. ಆ ಬಗ್ಗೆ ಕುಟುಂಬಸ್ಥರು ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಮೃತದೇಹ ಪತ್ತೆಯಾದ ಬಳಿಕ ‘ಅಯ್ಯಪ್ಪನ್ ಅವರ ನಿಗೂಢ ಸಾವಿನ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು’ ಎಂದು ಐಸಿಎಆರ್ನ ಮಾಜಿ ಸದಸ್ಯ ವೇಣುಗೋಪಾಲ್ ಬಾದರವಾಡ ಒತ್ತಾಯಿಸಿದ್ದರು. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.