ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಚಾಮರಾಜನಗರದಿಂದ ಸ್ಪರ್ಧಿಸುವ ವಿಚಾರ ಚರ್ಚೆಯಾಗಿಲ್ಲ: ಮಹದೇವಪ್ಪ

Published 28 ಡಿಸೆಂಬರ್ 2023, 8:43 IST
Last Updated 28 ಡಿಸೆಂಬರ್ 2023, 8:43 IST
ಅಕ್ಷರ ಗಾತ್ರ

ಮೈಸೂರು: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರ ಪಕ್ಷದ ಮಟ್ಟದಲ್ಲಿ ಚರ್ಚೆಯಾಗಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ತಿಳಿಸಿದರು.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ಖರ್ಗೆಯವರು ಇಲ್ಲಿ ಸ್ಪರ್ಧಿಸುತ್ತಾರೆ ಎಂಬುದೆಲ್ಲವೂ ಅಂತೆ–ಕಂತೆಯಷ್ಟೆ’ ಎಂದರು.

‘ಅಧ್ಯಕ್ಷರು ಇಲ್ಲಿ ಸ್ಪರ್ಧಿಸಿದರೆ ಸಂತೋಷ. ಲಕ್ಷ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ. ಅವರು ನಮ್ಮ ರಾಷ್ಟ್ರೀಯ ನಾಯಕರು. ಬಯಸಿದರೆ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT