ಮೈಸೂರು: ‘ಸದಭಿರುಚಿಯ ನಾಟಕ ಕಲೆ ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ಸೃಷ್ಟಿಸಬಲ್ಲದು’ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಪಿ. ಪ್ರಶಾಂತ್ ಗೌಡ ಅಭಿಪ್ರಾಯಪಟ್ಟರು.

ಅದಮ್ಯ ರಂಗಶಾಲೆಯು ರಂಗಾಯಣದ ಶ್ರೀರಂಗ ವೇದಿಕೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ‘ಕಣ್ಕಟ್ ನಗರ’ ಮಕ್ಕಳ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ರಂಗಭೂಮಿಗೆ ಮಹತ್ವದ ಸ್ಥಾನವಿದೆ. ಅದು ಜನರ ಬದುಕನ್ನು ತಿದ್ದಿ ತೀಡಿ ರೂಪಿಸುತ್ತದೆ. ನಾಟಕದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಸಾಧ್ಯವಿದೆ. ಆದ್ದರಿಂದ ಪೋಷಕರು ಮಕ್ಕಳಿಗೆ ಬಾಲ್ಯದಲ್ಲೇ ರಂಗ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.

ನಗಾರಿ ಬಾರಿಸಿ ಪ್ರದರ್ಶನಕ್ಕೆ ಚಾಲನೆ ನೀಡಿದ ನಿವೃತ್ತ ಡಿವೈಎಸ್ಪಿ ಶಾಂತಮಲ್ಲಪ್ಪ, ‘ಇಂದಿನ ಯುವಜನತೆಯಲ್ಲಿ ಸಾಹಿತ್ಯ, ಸಂಗೀತ, ನಾಟಕ ಕಲೆಯ ಕುರಿತು ಆಸಕ್ತಿ ಇಲ್ಲದ್ದಂತಾಗಿದೆ. ಅವರೆಲ್ಲ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಲೋಕದಲ್ಲಿ ಕಳೆದುಹೋಗಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.

ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡಿದರು. ವಿ.ಕೆ. ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ, ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ, ಪದಾಧಿಕಾರಿಗಳಾದ ಪರಮೇಶ್ ಕೆ. ಉತ್ತನಹಳ್ಳಿ, ಜ್ಯೋತಿ ಸೋಮರಾಜು, ಜಿ. ರವೀಂದ್ರ ಕುಮಾರ್, ಕುಮಾರಸ್ವಾಮಿ ವರುಣ ಉಪಸ್ಥಿತರಿದ್ದರು.

ತಿಪಟೂರಿನ ಟೈಮ್ಸ್ ಪಿಯು ಕಾಲೇಜಿನ ಆಡಳಿತಾಧಿಕಾರಿ ಕೆ.ಎಲ್. ಅನೂಪ್ ಮತ್ತು ಶಾಂತಮಲ್ಲಪ್ಪ ಅವರನ್ನು ಸನ್ಮಾನಿಸಲಾಯಿತು.

ಉಮಾಶ್ರೀ ಜಿ. ಕೂಡ್ಲಿಗಿ ನಿರ್ದೇಶನದಲ್ಲಿ ಅದಮ್ಯ ರಂಗಶಾಲೆಯ ಮಕ್ಕಳು ‘ಕಣ್ಕಟ್ ನಗರ’ ನಾಟಕ ಪ್ರಸ್ತುತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.