ಕೆ.ಆರ್.ನಗರ: ತಂತ್ರಜ್ಞಾನದ ಅರಿವಿನ ಜತೆಗೆ ಇಂಗ್ಲಿಷ್ ಭಾಷೆ ಕೌಶಲ ವೃದ್ಧಿಸಿಕೊಂಡರೆ ಉದ್ಯೋಗ ಅವಕಾಶ ಹೆಚ್ಚು ಲಭಿಸುತ್ತದೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂಗ್ಲಿಷ್ ಸಹ ಪ್ರಾಧ್ಯಾಪಕ ಗೋವಿಂದರಾಜು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಅಭಿವೃದ್ಧಿ ಕೋಶ ಮತ್ತು ಇಂಗ್ಲಿಷ್ ವಿಭಾಗ ಆಯೋಜಿಸಿದ್ದ ‘ಇಂದಿನ ದಿನಮಾನದಲ್ಲಿ ಇಂಗ್ಲಿಷ್ ಸಂವಹನ ಕೌಶಲದ ಪಾತ್ರ’, ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು.

‘ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹಾಗಾಗಿ, ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಕೌಶಲದ ಪರಿಣತಿ ಅಗತ್ಯವಾಗಿದೆ ಎಂದರು.

ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿ.ಪಿ.ಟಿ ಯಂತಹ ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಕೌಶಲ ಇದ್ದರೆ ಉದ್ಯೋಗ ದೊರೆಯುವುದು. ಉದ್ಯೋಗ ಕ್ಷೇತ್ರದಲ್ಲಿ ಇಂಗ್ಲಿಷ್ ಭಾಷೆ ಸಂವಹನ ಬಹು ಮುಖ್ಯ ಎಂದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪುಟ್ಟಸ್ವಾಮಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ದೀಪು ಕುಮಾರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರಶಾಂತ್ ಪಿ., ಕನ್ನಡ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಬಿ., ಸಹಾಯಕ ಪ್ರಾಧ್ಯಾಪಕ ಶಿವಾಜಿ, ಬೋಧಕರು, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.