ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅಲೆ ಇದೆ, 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಶ್ರೀರಾಮುಲು

Published 11 ಫೆಬ್ರುವರಿ 2024, 15:46 IST
Last Updated 11 ಫೆಬ್ರುವರಿ 2024, 15:46 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯವೂ ಸೇರಿದಂತೆ ದೇಶದಾದ್ಯಂತ ನರೇಂದ್ರ ಮೋದಿ ಅಲೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ’ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕಡಿಮೆ ಅವಧಿಯಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವ ವೇಗದಲ್ಲಿ ಅಧಿಕಾರಕ್ಕೆ ಬಂದಿತೋ ಅದೇ ವೇಗದಲ್ಲಿ ಪಾತಾಳಕ್ಕೆ ಬಿದ್ದಿದೆ. ಕಾಂಗ್ರೆಸ್‌ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪಿಸಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ಖಜಾನೆ ಖಾಲಿ ಮಾಡಿದೆ. ಹೀಗಾಗಿ, ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಾಗಿ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಿ ಬಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಕೈಹಿಡಿಯುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT