ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ಗೆ ಬೆದರಿಕೆ: ಪೊಲೀಸ್‌ ಆಯುಕ್ತರಿಗೆ ದೂರು

Published 28 ಅಕ್ಟೋಬರ್ 2023, 12:49 IST
Last Updated 28 ಅಕ್ಟೋಬರ್ 2023, 12:49 IST
ಅಕ್ಷರ ಗಾತ್ರ

ಮೈಸೂರು: ‘ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಮಾಡುತ್ತಿರುವ ಎಚ್‌.ಡಿ.ಕುಮಾರಸ್ವಾಮಿ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ಮುಖಂಡರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದರು.

‘ನಾನು ಅ.26ರಂದು ಪತ್ರಿಕಾಗೋಷ್ಠಿ ನಡೆಸಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಮಾಡಿರುವ ಆಧಾರರಹಿತ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದೇನೆ. ಇದಾದ ಬಳಿಕ ಅ.28ರಂದು ಕಲಾಮಂದಿರ ಆವರಣದ ಬಳಿ ಸೇರಿದ್ದ ಜೆಡಿಎಸ್‌ ಮುಖಂಡರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ನನ್ನ ಮೇಲೆ ದಾಳಿ ನಡೆಸಲು ಕುರಿತು ಮಾತನಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದೆ. ದೂರವಾಣಿ ಕರೆಯ ಮೂಲಕವೂ ಬೆದರಿಕೆ ಹಾಕುತ್ತಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಎಂ.ಲಕ್ಷ್ಮಣ್‌ ದೂರಿನಲ್ಲಿ ತಿಳಿಸಿದ್ದಾರೆ.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ವಕ್ತಾರ ಮಹೇಶ್, ಮುಖಂಡರಾದ ಹೆಡತಲೆ ಮಂಜುನಾಥ್, ಕಾರ್ಯದರ್ಶಿ ಶಿವಣ್ಣ, ಬಿ.ಎಂ.ರಾಮು, ಎನ್.ಆರ್.ನಾಗೇಶ್, ಉತ್ತನಹಳ್ಳಿ ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT