ಎಚ್.ಡಿ.ಕೋಟೆ: ‘10 ವರ್ಷಗಳ ಅವಧಿಯಲ್ಲಿ ಸುಮಾರು 161 ಮಂದಿ ಹುಲಿ ದಾಳಿಗೆ ತುತ್ತಾಗಿದ್ದು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಶುಕ್ರವಾರ ನಡೆದ ‘ಜನರೊಂದಿಗೆ ಜನತಾದಳ’ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮೈಸೂರು ಜಿಲ್ಲೆಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ 21 ಹುಲಿಗಳು ಕಾಡಿನಿಂದ ನಾಡಿಗೆ ಬಂದು ಇಲ್ಲಿನ ಜನರಿಗೆ ಉಪಟಳ ನೀಡಿರುವುದು ವರದಿಯಾಗಿದೆ. ಹುಲಿ ಉಪಟಳ ತಡೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ’ ಎಂದರು.

‘ಎಚ್.ಡಿ. ಕೋಟೆಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. 1989ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರವನ್ನು ಪಕ್ಷ ಗೆದ್ದಾಗ ಎಚ್.ಡಿ. ಕೋಟೆ ಕ್ಷೇತ್ರವೂ ಒಂದಾಗಿತ್ತು. ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಮುಖಂಡ ಕೆ.ಎಂ. ಕೃಷ್ಣನಾಯಕ ಅವರೇ ಈ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ’ ಎಂದರು.

ಮುಖಂಡ ಕೆ.ಎಂ. ಕೃಷ್ಣನಾಯಕ ಮಾತನಾಡಿ, ‘ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷದಿಂದ ಟಿಕೆಟ್ ಕೈತಪ್ಪಿತ್ತು, ಆಗ ಬಿಜೆಪಿಗೆ ಹೋಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದೆ, ಅದೇ ರೀತಿ ಈಗ ಜೆಡಿಎಸ್ಗೆ ಬಂದಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದೇನೆ, ಬಹುಮತಗಳ ಅಂತರದಿಂದ ಜಯಗಳಿಸುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ ಮಾತನಾಡಿದರು.

ಮಾಜಿ ಶಾಸಕ ಸಾ.ರಾ. ಮಹೇಶ್, ಪರಿಷತ್ ಸದಸ್ಯ ಮಂಜೇಗೌಡ, ಮುಖಂಡರಾದ ಮಹದೇವು, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ನಗರಾಧ್ಯಕ್ಷ ಮಂಜು ಸೇರಿದಂತೆ ಮುಖಂಡರು ಇದ್ದರು.

ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆ ನೀಡಲು ಪ್ರತಿಯೊಬ್ಬ ಸಾರ್ವಜನಿಕನ ಮೇಲೆ ₹1.17 ಲಕ್ಷ ಸಾಲ ಮಾಡಿದೆ ಅಲ್ಲದೇ ಹಾಲಿನಿಂದ ಆಲ್ಕೋಹಾಲ್ವರೆಗೂ ಬೆಲೆಗಳನ್ನು ದುಪ್ಪಟ್ಟು ಮಾಡಿದೆ
ಸಾ.ರಾ. ಮಹೇಶ್ ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.