ಸರಗೂರು (ಮೈಸೂರು ಜಿಲ್ಲೆ): ತಾಲ್ಲೂಕಿನ ಕಂದಲಿಕೆ ಹೋಬಳಿ ಹೊಸಕೋಟೆ ಗ್ರಾಮದ ಟ್ರೆಂಚ್ ಬಳಿ ಶನಿವಾರ ರಾತ್ರಿ ರಾತ್ರಿ 11ರಿಂದ 12 ವರ್ಷ ವಯಸ್ಸಿನ ಗಂಡು ಹುಲಿ ಸೆರೆಯಾಗಿದೆ.

ಹುಲಿ ಕಾರ್ಯಾಚರಣೆ ನಡೆಸುವಾಗ ಡ್ರೋನ್ ಕಾಮೆರಾದಲ್ಲಿ ಚಲನವಲನ ಪತ್ತೆಯಾಗಿತ್ತು. ಅದನ್ನು ಆಧರಿಸಿ ಸೆರೆ ಹಿಡಿಯಲಾಗಿದೆ. ಅದಕ್ಕೆ ಕತ್ತು ಮತ್ತು ಕಾಲಿನ ಭಾಗದಲ್ಲಿ ಗಾಯವಾಗಿದೆ ಎನ್ನಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹುಲಿಯನ್ನು ಮೈಸೂರು ತಾಲ್ಲೂಕಿನ ಕೂರ್ಗಳ್ಳಿಯಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿಎನ್ಎ ಪರೀಕ್ಷೆ ನಡೆಸಿ ಅದೇ ಹುಲಿಯೇ ಎಂದು ಖಚಿತಪಡಿಸಿಕೊಳ್ಳಲೂ ಖಂಡ್ರೆ ಸೂಚನೆ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನಲ್ಲಿ ಪದೇ ಪದೇ ದಾಳಿ ಮಾಡುತ್ತಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿ.ಎನ್.ಎ. ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬಂಡೀಪುರ ಮತ್ತು ನಾಗರಹೊಳೆಯ ಅರಣ್ಯದಂಚಿನಲ್ಲಿ ಹುಲಿಗಳು ಮನುಷ್ಯರ ಮೇಲೆ ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗಿದ್ದ ಕಾರಣ ಬಂಡೀಪುರ ಮತ್ತು ನಾಗರಹೊಳೆಯ ಸಫಾರಿ ಸ್ಥಗಿತಗೊಳಿಸಿ, ಅಲ್ಲಿನ ಸಿಬ್ಬಂದಿಯನ್ನು ಹುಲಿ ಸರೆ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಬಂಡೀಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳ ಜೊತೆಗೆ ಇತರ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ಹುಲಿ ಸೆರೆ ಕಾರ್ಯಾಚರಣೆಲ್ಲಿ ಭಾಗಿಯಾಗಿ ಹುಲಿಯನ್ನು ಹಿಡಿದಿದ್ದಾರೆ. ಈ ಹುಲಿಗೆ ಸುಮಾರು ಅಂದಾಜು 12 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಗಂಡು ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವಿವರಿಸಿದ್ದಾರೆ.

ವನ್ಯಜೀವಿ ವಿಭಾಗದ ಎ.ಪಿ.ಸಿ.ಸಿ.ಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರಿಗೆ ವಸತಿ ಪ್ರದೇಶಗಳ ಬಳಿ ಹುಲಿಗಳ ಸಂಚಾರ ಇರುವ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ, ಈ ಹುಲಿಯಲ್ಲದೆ ಬೇರೆ ಯಾವುದಾದರೂ ಹುಲಿಗಳು ಜನ, ಜಾನುವಾರಗಳ ಮೇಲೆ ದಾಳಿ ಮಾಡಿದೆಯೇ ಎಂಬ ಪರಿಶೀಲನೆ ಮಾಡಿ ಕಾರ್ಯಾಚರಣೆ ನಡೆಸಲು ಸೂಚಿಸಿರುವುದಾಗಿಯೂ ಹೇಳಿದ್ದಾರೆ.
.ಸರಗೂರು | ಹುಲಿ ದಾಳಿ: ಮತ್ತೊಬ್ಬ ರೈತ ಬಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.