ಮೈಸೂರು: ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಸಂಘಟನೆಯು ಆಪರೇಷನ್ ಸಿಂಧೂರದ ವಿಜಯೋತ್ಸವದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ತಿರಂಗ ಯಾತ್ರೆಯಲ್ಲಿ ಸಾವಿರಾರು ಜನರು 550 ಮೀಟರ್ ಉದ್ದದ ಬೃಹತ್ ತಿರಂಗವನ್ನು ಪ್ರದರ್ಶಿಸುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದರು.

ಇಲ್ಲಿನ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಆಶ್ರಮದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ದತ್ತ ವಿಜಯಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೊಮನಾಥೇಶ್ವರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಚಿನ್ಮಯಾನಂದ ಸ್ವಾಮೀಜಿ, ಬರ್ನಾಡ್ ಮೋರಸ್ ಷಾ, ರಿಯಾಜ್ ಖಾದ್ರಿ ಬಾಬಾ ಪುಷ್ಪಾರ್ಚನೆ ಮಾಡಿ ತಿರಂಗ ಯಾತ್ರೆಗೆ ಚಾಲನೆ ನೀಡಿದರು.

ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಯ ಸದಸ್ಯರು ತಿರಂಗವನ್ನು ಬಾನೆತ್ತರಕ್ಕೆ ಬೀಸುತ್ತಾ ಸಾಗಿದರು.

ಮೆಟ್ರೋಪೋಲ್ ವೃತ್ತದಿಂದ ಆರಂಭವಾದ ತಿರಂಗ ಯಾತ್ರೆಯು ಚಿಕ್ಕಗಡಿಯಾರ, ಅರಸು ರಸ್ತೆ ಮೂಲಕ ಸಾಗಿ ಜೆ.ಎಲ್.ಬಿ ರಸ್ತೆ ಜಂಕ್ಷನ್ ನಲ್ಲಿ ತಿರುವು ಪಡೆದು ಮೆಟ್ರೋಪೋಲ್ ವೃತ್ತದಲ್ಲಿ ಸಂಪನ್ನಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.