ಮೈಸೂರು: ‘ಪ್ರವಾಸೋದ್ಯಮ ಮತ್ತು ಶಾಂತಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆ.27ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಅಂಬಾವಿಲಾಸ ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ನಗರದ ಜಲದರ್ಶಿನಿಯ ಅತಿಥಿಗೃಹದಲ್ಲಿ ಬುಧವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ದಸರಾ, ಬ್ಲಾಗರ್ಸ್ ಮೀಟ್ ಮೊದಲಾದ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ. ಅಂದು ಅರಮನೆಯ ಮುಂಭಾಗದಲ್ಲಿ ಹೆಚ್ಚಿನ ಅತಿಥಿ ಪ್ರವಾಸಿಗರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು’ ಎಂದು ಹೇಳಿದರು.

‘ವಿವಿಧ ಕಲಾ ತಂಡಗಳ ಮೆರವಣಿಗೆ, ನೃತ್ಯ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂಥ ಕಾರ್ಯಕ್ರಮ ಆಯೋಜಿಸಬೇಕು. ಕಲಾತಂಡಗಳನ್ನು ಹೊರತುಪಡಿಸಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳೀಯ ಸಂಸ್ಕೃತಿ ಬಿಂಬಿಸುವಂಥ ಧಿರಿಸನ್ನು ಧರಿಸಿರಬೇಕು’ ಎಂದು ಸೂಚಿಸಿದರು.

ಸೋಮನಾಥಪುರ ಉತ್ಸವ 12ರಂದು: ‘ವಿಶ್ವ ಪರಂಪರೆ ತಾಣವಾಗಿ ಗುರುತಿಸಲಾಗಿರುವ ಸೋಮನಾಥಪುರದ ಉತ್ಸವವನ್ನು ಸೆ.12ರಂದು ಆಯೋಜಿಸಲಾಗಿದೆ. ಅಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಮಾಹಿತಿ ನೀಡಿದರು.

‘ಅಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಹೊಂದಿರುವ ಬ್ಲಾಗರ್‌ಗಳನ್ನು ಕರೆಸಲಾಗುತ್ತಿದೆ. ಅತಿಥಿಗಳನ್ನು ಉತ್ತಮವಾಗಿ ಸತ್ಕರಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.

ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.