ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಗನಚುಕ್ಕಿ: ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

Published 12 ಮೇ 2024, 15:00 IST
Last Updated 12 ಮೇ 2024, 15:00 IST
ಅಕ್ಷರ ಗಾತ್ರ

ಬೆಳಕವಾಡಿ: ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತದ ಬಳಿ ಭಾನುವಾರ ಕಾಲು ಜಾರಿ ಬಿದ್ದು ಗುಜರಾತ್‌ನ ಚೌಧರಿ ಕೌಶಿಕ್(26) ಎಂಬುವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿಟರಿ ತರಬೇತಿ ಕೇಂದ್ರದಲ್ಲಿ ಮಿಲಿಟರಿ ಪೊಲೀಸ್ ಸಿಬ್ಬಂದಿಯಾಗಿದ್ದ ಚೌಧರಿ ಕೌಶಿಕ್, ಏಳು ಮಂದಿ ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆ ಬಂದಿದ್ದರು. ಕೆಳಗಡೆ ಇಳಿಯುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಶವಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT