ಮೈಸೂರು: ‘ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ’ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.

ರದ್ದು: ಮಾರ್ಚ್ 16ರಂದು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ.

ಭಾಗಶಃ ರದ್ದು: ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು ಮಾರ್ಚ್ 16ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಸಂಚರಿಸುವುದಿಲ್ಲ. ಅಂದು ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ಪ್ರಯಾಣ ಆರಂಭಿಸಲಿದೆ.

ನಿಯಂತ್ರಣ: ಮಾರ್ಚ್ 10ರಂದು ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾರ್ಚ್ 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು.

ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ. ಅಂತೆಯೇ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269) ರೈಲುಗಳು ನಿಗದಿತ ಸಮಯಕ್ಕಿಂತ 60 ನಿಮಿಷ ತಡವಾಗಿ ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.