ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ನಗರ: ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ ಎರಡು ಜೋಡಿ

Published 10 ಡಿಸೆಂಬರ್ 2023, 13:59 IST
Last Updated 10 ಡಿಸೆಂಬರ್ 2023, 13:59 IST
ಅಕ್ಷರ ಗಾತ್ರ

ಕೆ.ಆರ್.ನಗರ: ಇಲ್ಲಿನ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಬಿ.ಸಿ.ಅರವಿಂದ್ರ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಎರಡು ಜೋಡಿಯ ಮನವೊಲಿಸಿ ಶನಿವಾರ ಒಂದು ಮಾಡಲಾಯಿತು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 98, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 96 ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 92, ಒಟ್ಟು 286 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲಾಯಿತು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಬಿ.ಸಿ.ಅರವಿಂದ್ರ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆರ್.ಪವಿತ್ರಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್.ಚಂದನ್ ಲೋಕ ಅದಾಲತ್‌ನಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT