ಮೈಸೂರು: ಜಿಲ್ಲೆಯಲ್ಲಿ ಗುರುವಾರ ಮತ್ತಿಬ್ಬರಿಗೆ ಕೋವಿಡ್ 19 ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

‘ಮಹಾರಾಷ್ಟ್ರದಿಂದ ಹಿಂದಿರುಗಿರುವ 39 ವರ್ಷದ ಮಹಿಳೆ ಮತ್ತು ರೋಗಿ–4219ರ ಸಂಪರ್ಕಕ್ಕೆ ಬಂದ ಐದು ವರ್ಷದ ಬಾಲಕಿಗೆ ಕೋವಿಡ್ ಇರುವುದು ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

‘ಆರು ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 11ಕ್ಕೆ ಇಳಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣಗಳು ದೃಢಪಟ್ಟಿದ್ದು, 112 ಮಂದಿ ಗುಣಮುಖರಾಗಿದ್ದಾರೆ. 1,657 ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಹಾಗೂ 132 ಮಂದಿ ಫೆಸಿಲಿಟಿ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ಮಾಹಿತಿ ನೀಡಲು ಮನವಿ: ಕೋವಿಡ್ ದೃಢಪಟ್ಟ ರೋಗಿ–7285 ಅವರು ಜೂನ್ 11 ರಂದು ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ರಾಜಹಂಸ ಬಸ್ಸಿನಲ್ಲಿ (ಕೆಎ-09-ಎಫ್-4663) ಮೈಸೂರಿಗೆ ಪ್ರಯಾಣ ಮಾಡಿದ್ದರು. ಆ ಬಸ್ಸಿನಲ್ಲಿ ಪ್ರಯಾಣಿಸಿರುವ ಪ್ರಯಾಣಿಕರು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ ಸಂಖ್ಯೆಗೆ 0821-2423800 ಕರೆ ಮಾಡಿ ಮಾಹಿತಿ ನೀಡುವಂತೆ ಡಿಎಚ್‌ಒ ಡಾ.ಆರ್.ವೆಂಕಟೇಶ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.