ಎಚ್.ಡಿ.ಕೋಟೆ: ದೇಶಾದ್ಯಂತ ಅಂಗವಿಕಲ ವ್ಯಕ್ತಿಗಳ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ ಯುಡಿಐಡಿ ಉಪ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಹಶೀಲ್ದಾರ್ ಶ್ರೀನಿವಾಸ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹೋಗದೊಂದಿಗೆ ಫಲಾನುಭವಿಗಳ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ ತಲುಪಿಸುವ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ 300 ರಿಂದ 350 ಫಲಾನುಭವಿಗಳಿದ್ದು, ಯುಡಿಐಡಿ ಕಾರ್ಡ್ ಮಾಡಿಸಬೇಕಾಗಿದೆ, ಫಲಾನುಭವಿಗಳು ಈ ಶಿಬಿರವನ್ನು ಸದುಪಯೋಗಪಡಿಸಿ ಪಡೆಸಿಕೊಳ್ಳಬೇಕು ಎಂದರು.

ಯುಡಿಐಡಿ ಯೋಜನೆಯಡಿಯಲ್ಲಿ, ಆಯಾ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಸೂಚಿಸಲಾದ ಸಮರ್ಥ ವೈದ್ಯಕೀಯ ಅಧಿಕಾರಿಗಳ ಮೂಲಕ ಅಂಗವಿಕಲ ವ್ಯಕ್ತಿಗಳಿಗೆ, ಪ್ರಮಾಣಪತ್ರಗಳು ಮತ್ತು ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ ಎಂದರು. ಸರ್ಕಾರಿ ಸವಲತ್ತುಗಳನ್ನು ತಲುಪಿಸುವ ವ್ಯವಸ್ಥೆಯಲ್ಲಿ ಪಾರದರ್ಶಕತೆ, ದಕ್ಷತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದರು. ಶಿಬಿರಲ್ಲಿ ಒಟ್ಟು 150 ಮಂದಿಗೆ ಯುಡಿಐಡಿ ಕಾರ್ಡ್ ಮಾಡಿಸಲು ತಜ್ಞವೈದ್ಯರಿಂದ ತಪಾಸಣೆಯನ್ನು ಮಾಡಿಸಲಾಯಿತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ.ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪೂರ್ಣಿಮಾ, ಕಾರ್ಯಕರ್ತ ಮಹದೇವಯ್ಯ, ಕಣ್ಣಿನ ತಜ್ಞ ಡಾ. ರಾಜಶೇಖರ್, ಕಿವಿ ಮತ್ತು ಮೂಗಿನ ತಜ್ಞರಾದ ಡಾ. ಶಿವಕುಮಾರ್, ಮೂಳೆ ತಜ್ಞ ಡಾ.ಶ್ರೀನಿವಾಸ್ ಮೂರ್ತಿ, ಸರ್ವ ಶಿಕ್ಷಣ ಅಭಿಯಾನದ ಶಿಕ್ಷಕ ಗಿರೀಶ್, ಮಹದೇವ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಗಾಯತ್ರಿ, ಶಾಂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.