ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 10ರಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮೈಸೂರಿಗೆ

Published 7 ಮಾರ್ಚ್ 2024, 15:26 IST
Last Updated 7 ಮಾರ್ಚ್ 2024, 15:26 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮಾರ್ಚ್‌ 10ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.

‘ಬೆಂಗಳೂರು–ಮೈಸೂರು ನಡುವಿನ ಹತ್ತು ಪಥಗಳ ಹೆದ್ದಾರಿಯಲ್ಲಿ ಪ್ರಮುಖ ನಗರಗಳಿಗೆ ₹1,200 ಕೋಟಿ ವೆಚ್ಚದಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೈಸೂರು–ಕುಶಾಲನಗರ ನಡುವಿನ ಚತುಷ್ಪಥ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ಮಾಡಲಿದ್ದಾರೆ’ ಎಂದು ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.

‘ಮೈಸೂರು ನಗರದ ಕ್ರಾಫರ್ಡ್‌ ಪಕ್ಕದಲ್ಲಿರುವ ಲೆವಲ್‌ ಕ್ರಾಸಿಂಗ್‌ 1 ಹಾಗೂ ಹೋಟೆಲ್‌ ರಾಯಲ್‌ ಇನ್‌ ಬಳಿಯ ಲೆವಲ್‌ ಕ್ರಾಸಿಂಗ್‌ 5‌ರಲ್ಲಿ ರೈಲು ಸೇತುವೆಗಳ ನಿರ್ಮಾಣ, ಮೈಸೂರಿನ ರಿಂಗ್‌ ರಸ್ತೆಯಲ್ಲಿ ಏಳು ಕಡೆ ಗ್ರೇಡ್ ಸಪರೇಟರ್‌ಗಳ ನಿರ್ಮಾಣ, ವಿವಿಧ ರಸ್ತೆಗಳಲ್ಲಿನ ಅಪಘಾತ ವಲಯಗಳ ದುರಸ್ತಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಮೈಸೂರು–ನಂಜನಗೂಡು ರಸ್ತೆಯನ್ನು ಆರು ಪಥಗಳನ್ನಾಗಿ ನಿರ್ಮಿಸುವ ಯೋಜನೆಯನ್ನು  ಘೋಷಿಸುವ ಸಾಧ್ಯತೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT