ಮೈಸೂರು: ‘ಫೈನಾನ್ಸ್ ಕಂಪನಿಗಳು ಸಾಲಗಾರರಿಗೆ ಪೊಲೀಸರ ರಕ್ಷಣೆ ಪಡೆದೇ ತೊಂದರೆ ಕೊಡುತ್ತಿವೆ ಎಂಬ ಮಾಹಿತಿ ಇದೆ. ಆದರೆ, ನಾನು ಪೊಲೀಸರ ಮೇಲೆ ಆರೋಪ ಮಾಡುವುದಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ; ಜನರಿಗೆ ಕಿರುಕುಳ ನೀಡುವ ಪ್ರಕರಣಗಳು ನಡೆಯುತ್ತಿವೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ದೂರಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ನೋಂದಾಯಿತ ಮೈಕ್ರೊ ಫೈನಾನ್ಸ್ ಕಂಪನಿಗಳು ಮಾತ್ರವೇ ಆರ್ಬಿಐ ಮಾರ್ಗಸೂಚಿಗೆ ಒಳಪಡುತ್ತವೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಮುಖ್ಯಮಂತ್ರಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಿಯಮಗಳನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ಪೊಲೀಸರಿಗೆ ಅಧಿಕಾರ ಕೊಟ್ಟು ಅದರಲ್ಲಿ ಭ್ರಷ್ಟಾಚಾರ ಆಗಬಾರದು. ಸಮಿತಿ ರಚಿಸಿದರೆ ಅದಕ್ಕೆ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಿ ಮೇಲ್ವಿಚಾರಣೆ ಮಾಡಬೇಕು’ ಎಂದರು.

‘ಸಾಲಕ್ಕೆ ಇಂತಿಷ್ಟೆ ಬಡ್ಡಿ ವಿಧಿಸಬೇಕು ಎಂಬುದು ಆರ್ಬಿಐ ಮಾರ್ಗಸೂಚಿಯಲ್ಲಿದೆ. ಆದರೆ, ನೋಂದಾಯಿಸದ ಫೈನಾನ್ಸ್ ಕಂಪನಿಗಳು ಸಾಕಷ್ಟಿವೆ. ಅವುಗಳನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು’ ಎಂದು ಹೇಳಿದರು.

‘ರಾಜ್ಯದಲ್ಲಿ ಏನೇ ನಡೆದರೂ ಅದಕ್ಕೆಲ್ಲಾ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಹಾಕುವ ಕೆಲಸವನ್ನು ಕಾಂಗ್ರೆಸ್ನವರು ಮಾಡುತ್ತಲೇ ಬಂದಿದ್ದಾರೆ. ಮಳೆ ಹೆಚ್ಚಾದರೂ, ಕಡಿಮೆಯಾದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿಯೇ ಕಾರಣ ಎನ್ನುತ್ತಾರೆ. ಇಂತಹ ಬಾಲಿಶ ಹೇಳಿಕೆಗಳನ್ನು ಕೊಡುವುದನ್ನು ಬಿಡಬೇಕು. ಅವರಿಗೆ ಜನರು ಅಧಿಕಾರ ಕೊಟ್ಟಿದ್ದಾರೆ, ಒಳ್ಳೆಯ ಕೆಲಸಗಳನ್ನ ಮಾಡಲಿ. ಅದನ್ನು ಬಿಟ್ಟು ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕಾಂಗ್ರೆಸ್ ನಾಯಕರು ಕುರ್ಚಿ ಜಗಳದಲ್ಲಿ ನಿರತರಾಗಿದ್ದಾರೆ’ ಎಂದು ಟೀಕಿಸಿದರು.

‘ಮುಡಾ ಪ್ರಕರಣದಲ್ಲಿ ಏನಾದರೂ ಮಾಡಿ ತಪ್ಪಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರ ಆದೇಶದ ವಿರುದ್ಧವಾಗಿ ಹೈಕೋರ್ಟ್ಗೆ ಹೋದರು. ಆದರೆ, ರಾಜ್ಯಪಾಲರ ನಡೆಯನ್ನು ಹೈಕೋರ್ಟ್ ತಪ್ಪೆನ್ನಲಿಲ್ಲ. ಆದರೂ ಸಿದ್ದರಾಮಯ್ಯ ಅನೈತಿಕವಾಗಿ ಅಧಿಕಾರದಲ್ಲಿ ಮುಂದುವರಿದಿದ್ದಾರೆ’ ಎಂದು ಆರೋಪಿಸಿದರು.
.ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಹೊಸ ಕಾನೂನು ಜಾರಿ: ಸಿಎಂ.ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ: ಕೃಷ್ಣ ಬೈರೇಗೌಡ.ಮೈಕ್ರೊ ಫೈನಾನ್ಸ್ ಕಂಪನಿಗಳ ಹಾವಳಿ: ಸಿಐಡಿ ತನಿಖೆ ಸೂಕ್ತ ಎಂದ ಸತೀಶ್ ಜಾರಕಿಹೊಳಿ.ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ: ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ CM ಎಚ್ಚರಿಕೆ.‘ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕೆ ಕಾನೂನು ತನ್ನಿ’; ಸಚಿವರಿಗೆ ಮನವಿ.ಹಾವೇರಿ: ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆಯುತ್ತಿರುವ ಜನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.