ಮೈಸೂರು: ‘ವರುಣ ಕ್ಷೇತ್ರ ಅಭಿವೃದ್ದಿಯಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣ ಕ್ಷೇತ್ರದ ಪುಟ್ಟೇಗೌಡನ ಹುಂಡಿಯಲ್ಲಿ ಕೆಪಿಟಿಸಿಎಲ್ ಸಿ.ಎಸ್.ಆರ್. ನಿಧಿಯಡಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪುಟ್ಟೇಗೌಡನ ಹುಂಡಿ ಹಾಗೂ ಚಟ್ನಳ್ಳಿ ಗ್ರಾಮಗಳಲ್ಲಿ ₹45 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ, ಕೀಳನಪುರದಲ್ಲಿ ₹ 30 ಲಕ್ಷ ವೆಚ್ಚದಲ್ಲಿ 2 ಕೊಠಡಿ, ಕೆಂಪೇಗೌಡನ ಹುಂಡಿಯಲ್ಲಿ ₹15 ಲಕ್ಷ ವೆಚ್ಚದಲ್ಲಿ 1 ಕೊಠಡಿ, ಮೆಲ್ಲಹಳ್ಳಿಯಲ್ಲಿ ಕೊಠಡಿ ನಿರ್ಮಾಣದ ಜೊತೆಗೆ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹11.5 ಕೋಟಿ ನೀಡಲಾಗಿತ್ತು. ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಿಎಸ್ಆರ್ ನಿಧಿ ಅಡಿ ಕೊಠಡಿ ನಿರ್ಮಾಣ ಮಾಡುತ್ತಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಮಹೇಶ್ಕುಮಾರ್, ಇಒ ಕೃಷ್ಣ, ಡಿಡಿಪಿಐ ಉದಯ್ಕುಮಾರ್, ಬಿಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜುಂಡಸ್ವಾಮಿ, ಮಹದೇವಪ್ಪ, ಮುಖಂಡರಾದ ಬೀರೇಗೌಡ, ಮಹದೇವಪ್ಪ ಎಂ.ಟಿ. ರವಿಕುಮಾರ್ ಜಿ.ಕೆ. ಬಸವಣ್ಣ, ಸಿದ್ದರಾಮೇಗೌಡ, ಶಿವಸ್ವಾಮಿ, ಪ್ರದೀಪ್ಕುಮಾರ್, ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.