ಮೈಸೂರು: ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ‘ಭಾರತ ರತ್ನ’ ಪುರಸ್ಕಾರ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ‘ಶಿವಕುಮಾರಸ್ವಾಮೀಜಿ ಅವರು ನಡೆದಾಡುವ ದೇವರು ಎಂದೇ ಹೆಸರು ಪಡೆದಿದ್ದಾರೆ. ಇಂತಹ ಮಹಾನ್ ವ್ಯಕ್ತಿಗೆ ‘ಭಾರತ ರತ್ನ’ ಪುರಸ್ಕಾರ ನೀಡಲು ರಾಜ್ಯ ಸರ್ಕಾರ ಚಿಂತನೆಯೇ ನಡೆಸಿಲ್ಲ. ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುತ್ತಾರೆ. ಇನ್ನೂ ಏಕೆ ‘ಭಾರತ ರತ್ನ’ ನೀಡಿಲ್ಲ’ ಎಂದು ಪ್ರಶ್ನಿಸಿದರು.

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ರಾಜ್ಯಕ್ಕೆ ದೊಡ್ಡ ಕಳಂಕ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಾಂಸ್ಕೃತಿಕ ಹಿನ್ನೆಲೆ ಇಲ್ಲ. ಹೀಗಾಗಿಯೇ, ಇವರು ಸ್ವಾಮೀಜಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಲು ಪ್ರಯತ್ನಿಸಿಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಕೆಟ್ಟ ದಾರಿ ಹಿಡಿದು, ಕನ್ನಡವನ್ನು ತುಳಿಯುತ್ತಿದ್ದಾರೆ ಎಂದು ಕಿಡಿಕಾರಿದರು.

ಪಕ್ಷದ ಕಾರ್ಯದರ್ಶಿ ಪಾರ್ಥಸಾರಥಿ, ಸಂಘಟನಾ ಕಾರ್ಯದರ್ಶಿ ರಾಮು, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಗೌರವ ಅಧ್ಯಕ್ಷರಾದ ತಾಯೂರು ವಿಠಲಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.