ಮೈಸೂರು: ‘ವೀರಶೈವ ಲಿಂಗಾಯತ ಸಮಾಜ ವಿಭಜಿಸುವ, ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸದ ಕೆಲಸ ನಡೆಯುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಭಾನುವಾರ ಇಲ್ಲಿನ ಕೆ.ಆರ್.ಮೊಹಲ್ಲಾದ ಹುಲ್ಲಿನಬೀದಿಯಲ್ಲಿ ಗುರುಮಲ್ಲೇಶ್ವರ ದಾಸೋಹ ಮಠ ಹಾಗೂ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಬೇಕು.

‘ರಾಜಕಾರಣದಲ್ಲಿ ಧರ್ಮ ಇರಬೇಕು. ಆದರೆ, ಕೆಲವರು ಧರ್ಮದಲ್ಲಿ ರಾಜಕಾರಣ ತಂದು ಷಡ್ಯಂತ್ರ ನಡೆಸುತ್ತಿದ್ದಾರೆ. ಇಂದು ವೀರಶೈವ ಲಿಂಗಾಯತ ಸಮಾಜಕ್ಕೆ ಹಿನ್ನಡೆಯಾಗುತ್ತಿದ್ದರೂ ಪುಟಿದೇಳಲಿದೆ. ಇತರ ಸಮುದಾಯಕ್ಕೂ ಆಶ್ರಯ ನೀಡಿ ಹಿಂದೂ ಸಮಾಜವನ್ನು ಸುಭದ್ರಗೊಳಿಸಲಿದೆ’ ಎಂದರು.

‘ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಶೇ 80ರಷ್ಟು ಬೆಳೆ ಹಾನಿಯಾಗಿದೆ. ಪರಿಹಾರಕ್ಕಾಗಿ ಆಗ್ರಹಿಸಬೇಕಿದ್ದ ರೈತ ಸಂಘಟನೆಗಳು ಧ್ವನಿ ಕಳೆದುಕೊಂಡಿವೆ’ ಎಂದು ಹೇಳಿದರು.

‘ಬಿ.ಎಸ್.ಯಡಿಯೂರಪ್ಪ ಅವರು ಸಿ.ಎಂ ಆಗಿದ್ದಾಗಲೂ ಇಂತಹದ್ದೇ ಸ್ಥಿತಿ ಮೂಡಿತ್ತು. ಅಂದು ಸಚಿವ ಸಂಪುಟ ಪೂರ್ಣ ರಚನೆ ಆಗಿರದಿದ್ದರೂ ಏಕಾಂಗಿಯಾಗಿ ರೈತರ ಬೆಂಬಲಕ್ಕೆ ನಿಂತಿದ್ದರು’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಉದಾರವಾಗಿ ರೈತರಿಗೆ ಸ್ಪಂದಿಸಬೇಕು. ಸಂಕಷ್ಟದಲ್ಲಿರುವ ರೈತರ ಬೆಂಬಲಕ್ಕೆ ಮಠಗಳು ನಿಲ್ಲಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.