ಮೈಸೂರು: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾನುವಾರ ನಗರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವುದರಿಂದ ಪೊಲೀಸ್ ಇಲಾಖೆ ಭದ್ರತೆ ಕೈಗೊಂಡಿದ್ದು, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸ್ಥಳ ಪರಿಶೀಲನೆ ನಡೆಸಿದರು.

ಜೆಎಸ್ಎಸ್ ಡೆಂಟಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ, ಪೊಲೀಸ್ ಬಂದೋಬಸ್ತ್, ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕರ್ತವ್ಯ ಹಂಚಲಾಯಿತು.

ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ನಿರ್ಬಂಧ:

ಚಾಮುಂಡಿ ಬೆಟ್ಟಕ್ಕೆ ಉಪರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದಿಗೆ ಮಹಾಭಿಷೇಕ ಮುಂದಕ್ಕೆ:

ಭದ್ರತೆಯ ದೃಷ್ಟಿಯಿಂದ ಚಾಮುಂಡಿ ಬೆಟ್ಟದ ನಂದಿಗೆ ಕಾರ್ತೀಕ ಮಾಸದ ಅಂಗವಾಗಿ ಆಯೋಜಿಸಿದ್ದ 20ನೇ ವರ್ಷದ ಮಹಾಭಿಷೇಕ ಪೂಜಾ ಮಹೋತ್ಸವವನ್ನು ಸೋಮವಾರ (ನ.17)ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.