ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಸಂತ್ರಸ್ತ ಹೆಣ್ಣು ಮಕ್ಕಳು ಧ್ವನಿಯೆತ್ತಿ: ಹರಿಹರ ಆನಂದಸ್ವಾಮಿ

Published 2 ಮೇ 2024, 14:15 IST
Last Updated 2 ಮೇ 2024, 14:15 IST
ಅಕ್ಷರ ಗಾತ್ರ

ಮೈಸೂರು: ‘ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಶಾಸಕ ಎಚ್.ಡಿ.ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಅಶ್ಲೀಲ ಕೃತ್ಯಗಳ ತನಿಖೆಯನ್ನು ಸಮಗ್ರವಾಗಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಬೇಕು. ಇವರ ವಿರುದ್ಧ ಸಂತ್ರಸ್ತ ಹೆಣ್ಣು ಮಕ್ಕಳು ಧೈರ್ಯದಿಂದ ಧ್ವನಿ ಎತ್ತಬೇಕು’ ಎಂದು ಕರ್ನಾಟಕ ದಲಿತ ಚಳವಳಿ ನವನಿರ್ಮಾಣ ವೇದಿಕೆ ಮುಖಂಡ ಹರಿಹರ ಆನಂದಸ್ವಾಮಿ ಮನವಿ ಮಾಡಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಸಹಾಯಕತೆಯನ್ನು ಬಳಸಿಕೊಂಡು ಅಕ್ಷಮ್ಯ ಅಪರಾಧ ಎಸಗಲಾಗಿದೆ. ವಯಸ್ಸು, ಸಂಬಂಧಗಳನ್ನು ಅರಿಯದೆ ವಿಕೃತವಾಗಿ ವರ್ತಿಸಲಾಗಿದೆ. ಇಂಥದ್ದೇ ಹಿನ್ನೆಲೆಯಿರುವ ಅನೇಕರು ಆಧುನಿಕ ಕೀಚಕ ಕಾಮುಕರು ಸಮಾಜದಲ್ಲಿದ್ದು, ಅವರೆಲ್ಲರ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಪ್ರಮುಖರಾದ ಬಂಗವಾದಿ ನಾರಾಯಣಪ್ಪ, ಸತೀಶ್ ಮೈಸೂರು, ಕಿರಣ್ ಪಡುವಾರಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT