ಮೈಸೂರು: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಳ್ಳಲಾಗಿರುವ ‘ಬಿಎಸ್ವೈ ಅಭಿಮಾನೋತ್ಸವ’ದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಶನಿವಾರ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಕರ್ನಾಟಕದಲ್ಲಿ ಕೆಲವರು ಅದೃಷ್ಟದಿಂದ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ. ಸತತ ಹೋರಾಟದಿಂದ ಆ ಸ್ಥಾನ ಗಳಿಸಿದವರು. 50 ವರ್ಷಗಳ ರಾಜಕಾರಣದಲ್ಲಿ 45 ವರ್ಷ ಹೋರಾಟವನ್ನೇ ಮಾಡಿದ್ದಾರೆ. ಇದನ್ನು ಸ್ಮರಿಸುವ ಕಾರಣದಿಂದ ನಾವು ಸಮಾವೇಶ ನಡೆಸುತ್ತಿದ್ದೇವೆ’ ಎಂದರು.

‘ವಿಧಾನಸಭೆ ಚುನಾವಣೆಗೆ ಆರು ತಿಂಗಳಿದೆ ಎನ್ನುವಾಗ ಸಮಾವೇಶ ನಡೆಸಿದ್ದರೆ, ರಾಜಕೀಯ ಲಾಭದ ಲೆಕ್ಕಾಚಾರ ಹಾಕಬಹುದಿತ್ತು. ಈಗ ಆ ರೀತಿಯ ಪ್ರಶ್ನೆ ಉದ್ಭವಿಸುವುದಿಲ್ಲ. ರಾಜಕಾರಣಿಗಳ ಜೊತೆಗೆ, ರಾಜ್ಯದ ಬಹುತೇಕ ಮಠಾಧೀಶರೂ ಭಾಗವಹಿಸುತ್ತಾರೆ. ಸಮಾವೇಶದ ಸಂದೇಶ ಏನೆಂಬುದು ಅದು ಮುಗಿದ ಬಳಿಕ ಗೊತ್ತಾಗಲಿದೆ. 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.