ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮ ನಿಗಮ; ಸಾಲ ಮನ್ನಾಕ್ಕೆ ಆಗ್ರಹ

Published 6 ಜನವರಿ 2024, 15:47 IST
Last Updated 6 ಜನವರಿ 2024, 15:47 IST
ಅಕ್ಷರ ಗಾತ್ರ

ಮೈಸೂರು: ‘ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ನೀಡಿದ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಬೇಕು. ಈ ಕುರಿತು ಜ.7ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಶಾಸಕರ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಿದ್ದೇವೆ’ ಎಂದು ನಿಗಮದ ನಾಮನಿರ್ದೇಶಿತ ಸದಸ್ಯ ಎ.ಎನ್.ಸಿದ್ದಪ್ಪಾಜಿ ವಿಶ್ವಕರ್ಮ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಬಳಿಕ ಸಮುದಾಯವು ಆರ್ಥಿಕ ಹಿನ್ನಡೆಗೆ ಒಳಗಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೂ ಸಂಕಷ್ಟ ಎದುರಾಗಿದ್ದು, ಸಾಲ ಮನ್ನಾ ಅಲ್ಪ ಚೇತರಿಕೆ ನೀಡಬಲ್ಲದು. ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ನೇತೃತ್ವದಲ್ಲಿ ಮನವಿ ಪತ್ರ ನೀಡಲಾಗುವುದು. ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮುದಾಯದ ಪ್ರಮುಖರಾದ ಸಿದ್ದಾಚಾರಿ, ಮಹೇಶ್, ವೆಂಕಟೇಶ್, ಅರ್ಕೇಶಾಚಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT