ತಿ. ನರಸೀಪುರ: ಮತದಾರರಿಗೆ ಶಿಕ್ಷಣ ನೀಡುವುದು ಮತ್ತು ಮತದಾರರ ಪಟ್ಟಿಯ ಶುದ್ಧೀಕರಣವು ಸ್ವತಂತ್ರ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅತ್ಯಗತ್ಯ ಎಂದು ವಿದ್ಯೋದಯ ಬಾಲಿಕಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ, ಚುನಾವಣಾ ಸಾಕ್ಷರತಾ ಕ್ಲಬ್ನ ಸಂಯೋಜಕ ಸಿ. ಕೆ. ಚಂದ್ರಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ತಾಲ್ಲೂಕಿನ ಪಿಯು ವಿದ್ಯಾರ್ಥಿಗಳಿಗೆ ಸೋಮವಾರ ಏರ್ಪಡಿಸಿದ್ದ ‘ಮತದಾರರಿಗೆ ಶಿಕ್ಷಣ ನೀಡುವಲ್ಲಿ ಮತ್ತು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವಲ್ಲಿ ಮತಗಟ್ಟೆ ಅಧಿಕಾರಿಯ ಪಾತ್ರ’ ಎಂಬ ವಿಷಯದ ಕುರಿತ ಪ್ರಬಂಧ ಸ್ಪರ್ಧೆ ಉದ್ಘಾಟಿಸಿ ಅವರ ಮಾತನಾಡಿದರು.

ಮತಗಟ್ಟೆ ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಕೊಂಡಿಗಳಾಗಿ ಕಾರ್ಯನಿರ್ವಹಿಸುತ್ತಾರೆ. ವಿದ್ಯಾರ್ಥಿಗಳು ಚುನಾವಣೆಯ ಮಹತ್ವ ಅರಿತು ಜಾಗೃತ ನಾಗರಿಕರಾಗಿ ರೂಪುಗೊಳ್ಳುವಂತೆ ತಮ್ಮ ಪ್ರಬಂಧಗಳಲ್ಲಿ ಅಭಿವ್ಯಕ್ತಿಗೊಳಿಸಲು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಲಿಂಗರಾಜು ಮಾತನಾಡಿ, ಇಂತಹ ಶೈಕ್ಷಣಿಕ ಹಾಗೂ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಜವಾಬ್ದಾರಿಯುತ ಮತದಾನದ ಅರಿವು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಚುನಾವಣಾ ಜಾಗೃತಿ ಹಾಗೂ ಮತದಾರರ ಕರ್ತವ್ಯದ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿಠ್ಠಲ್, ಮೊಹಿಸ್ಸಿನಾ ಫಾತಿಮಾ, ಅನುಶ್ರೀ, ಮೇಘನಾ, ರಾಜಶೇಖರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.